28.8 C
Mumbai
June 30, 2026
Mumbai News Kannada
ಸುದ್ದಿ

ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳುವಂತೆ ಎಚ್ಚರವಹಿಸಲು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಕರೆ





ಮುಲ್ಕಿ: ಜೂನ್ 30ರಿಂದ ಜುಲೈ 29ರವರೆಗೆ ರಾಜ್ಯದಲ್ಲಿ ನಡೆಯಲಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮನೆಗಳಿಗೆ ಭೇಟಿ ನೀಡುವ ಬಿಎಲ್‌ಒಗಳಿಗೆ ಅಗತ್ಯ ಮಾಹಿತಿಯನ್ನು ಒದಗಿಸುವುದರೊಂದಿಗೆ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಯುವಂತೆ ನೋಡಿಕೊಳ್ಳಬೇಕು ಎಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮನವಿ ಮಾಡಿದೆ.

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಯಾಗದಿದ್ದಲ್ಲಿ ಭವಿಷ್ಯ ದಲ್ಲಿ ವಿವಿಧ ಸರ್ಕಾರಿ ಸೇವೆಗಳು ಹಾಗೂ ಯಾವುದೇ ಸರ್ಕಾರಿ ಸೌಲಭ್ಯಗಳನ್ನು ಪಡೆಯುವ ಸಂದರ್ಭದಲ್ಲಿ ಅವಕಾಶ ವಂಚಿತರಾಗಿ ತೊಂದರೆಗಳು ಉಂಟಾಗುವ ಸಾಧ್ಯತೆ ಇರುವುದು. ಬಡತನ, ದಾಖಲೆಗಳ ಕೊರತೆ, ಸ್ಥಳಾಂತರ, ಅಂಗವೈಕಲ್ಯ ಅಥವಾ ಮಾಹಿತಿಯ ಕೊರತೆಯಿಂದ ಯಾವುದೇ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಇದು ಚುನಾವಣಾ ಆಯೋಗ, ರಾಜಕೀಯ ಪಕ್ಷಗಳು ಮತ್ತು ಪ್ರತಿಯೊಬ್ಬ ಜಾಗೃತ ನಾಗರಿಕನ ಜವಾಬ್ದಾರಿಯಾಗಿದೆ ಎಂದು ರಾಷ್ಟ್ರೀಯ ಬಿಲ್ಲವ ಮಹಾಮಂಡಲ ತಿಳಿಸಿದೆ.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಯಶಸ್ವಿಯಾಗಲು ಮನೆ ಮನೆಗಳಿಗೆ ಭೇಟಿ ನೀಡುವ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಸಾರ್ವಜನಿಕರು ಸಂಪೂರ್ಣ ದಾಖಲೆ ಸಹಿತ ಸಹಕಾರ ನೀಡುವಂತೆ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಸೂರ್ಯ ಜೆ. ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ನಾಸಿಕ್ ಟಿಸಿಎಸ್ ಬಿಪಿಒ ಘಟಕದಲ್ಲಿ ಲೈಂಗಿಕ ಕಿರುಕುಳ ಮತ್ತು ಮತಾಂತರ ಆರೋಪ: ತಲೆಮರೆಸಿಕೊಂಡಿದ್ದ ನಿದಾ ಖಾನ್ ಅಂತಿಮವಾಗಿ ಪೊಲೀಸರ ವಶಕ್ಕೆ

Mumbai News Desk

ತ್ರಿಶಿಕಾ ನರೇಂದ್ರ ಶೆಟ್ಟಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Mumbai News Desk

ನೀಟ್ ಯುಜಿ 2026 ಪರೀಕ್ಷೆ ರದ್ದು: ಪೇಪರ್ ಸೋರಿಕೆ ಹಿನ್ನೆಲೆಯಲ್ಲಿ ಎನ್‌ಟಿಎ ಮಹತ್ವದ ನಿರ್ಧಾರ

Mumbai News Desk

ಸಮಾಜ ಸೇವಕ ಯೋಗೇಶ್ ಕೆ ಹೆಜ್ಮಾಡಿ‌‌ ದಂಪತಿ ಹಾಗೂ  ಗೋಪಾಲ್ ವಿ ಅಂಚನ್ ದಂಪತಿ ಆವರ ದಾಂಪತ್ಯ ಜೀವನದ ಸ್ವರ್ಣ  ಮಹೋತ್ಸವ  ಸಂಭ್ರಮ ಆಚರಣೆ,

Mumbai News Desk

” ಸಾಧನೆಯ ಮೂಲಕ ಮನಸ್ಸನ್ನು ತಿಳಿಗೊಳಿಸುವುದೇ ಜೀವನದ ಮುಖ್ಯ ಉದ್ದೇಶ “: ಶ್ರೀ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ.

Mumbai News Desk

ಬಂಟ್ಸ್ ಫೋರಮ್ ಮೀರಾ-ಭಾಯಂದರ್ ವತಿಯಿಂದ ತಿರುಪತಿ ಯಾತ್ರೆ

Mumbai News Desk