30 C
Mumbai
August 21, 2026
Mumbai News Kannada
ಪ್ರಕಟಣೆ

ಜು.10 : ಹರಿಶ್ಚಂದ್ರ ಪಿ ಸಾಲ್ಯಾನ್ ರವರ 24 ನೇ ಕೃತಿ ‘ತುಳುನಾಡಿನ ಆಟಿ ತಿಂಗಳು’ ಬಿಡುಗಡೆ.





ವಿದ್ಯಾದಾಯಿನಿ ಸಭಾ ಫೋರ್ಟ್ ಮುಂಬಯಿ ಮತ್ತು ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆ ಫೋರ್ಟ್ ಇದರ ವತಿಯಿಂದ ಮುಲ್ಕಿ ಹರಿಶ್ಚಂದ್ರ ಪಿ.ಸಾಲ್ಯಾನ್ ರವರ 24ನೇ ಕೃತಿ ಆಟಿ ತಿಂಗಳ ವಿಶೇಷತೆಯ ಕುರಿತ ‘ತುಳುನಾಡಿನ ಆಟಿ ತಿಂಗಳು’ ಕೃತಿಯು ಜುಲೈ 10 ರಂದು ಬಿಡುಗಡೆ ಆಗಲಿದೆ.
ಈ ಕಾರ್ಯಕ್ರಮವು ಫೋರ್ಟ್ ಜಿ.ಪಿ.ಓದ ಎದುರು, ಮನೋಹರ್ ದಾಸ್(ಮೋದಿ) ಸ್ಟ್ರೀಟ್ ನಲ್ಲಿರುವ ಮನಪಾ(ಕೆನರಾ ವಿದ್ಯಾದಾಯಿನಿ ರಾತ್ರಿ) ಶಾಲೆಯ ಸಭಾಗ್ರಹದಲ್ಲಿ ಸಾಯಂಕಾಲ 6 ಗಂಟೆಗೆ ಸರಿಯಾಗಿ ನಡೆಯಲಿದೆ.
ಕಾರ್ಯಕ್ರಮವು ವಿದ್ಯಾದಾಯಿನಿ ಸಮಾಜ ಅಧ್ಯಕ್ಷ ಪುರುಷೋತ್ತಮ ಎಸ್.ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಕೃತಿಯನ್ನು ಕರ್ನಾಟಕ ಮಲ್ಲ ದಿನಪತ್ರಿಕೆಯ ಸಂಪಾದಕ ಚಂದ್ರಶೇಖರ ಪಾಲೆತ್ತಾಡಿಯವರು ಬಿಡುಗಡೆ ಮಾಡಲಿದ್ದಾರೆ.


ಅತಿಥಿಗಳಾಗಿ ಫೋರ್ಟ್ ಭುವನೇಶ್ವರಿ ಸೇವಾ ಸಮಿತಿಯ ಪ್ರಧಾನ ಅರ್ಚಕರಾದ ರಾಜೇಶ್ ಭಟ್, ಬಿಲ್ಲವರ ಅಸೋಸಿಯೇಶನ್ ಇದರ ಮೂಲುಂಡ್ ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ಶಂಕರ್ ಎಸ್.ಅಮೀನ್, ತುಳುನಾಡ ಸೇವಾ ಸಮಾಜ ಮೀರಾಭಾಯಂದರ್ ಇದರ ಸಂಚಾಲಕ ಹಾಗೂ ತುಳು ವರ್ಲ್ಡ್ ಫೌಂಡೇಶನ್ ನ ಉಪಾಧ್ಯಕ್ಷ ಜಯಪ್ರಕಾಶ್ ಪೂಜಾರಿ, ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರಕಾಶ್ಚಂದ್ರ ಬಂಗೇರ ಹಾಗೂ ಭುವನೇಶ್ವರಿ ಸೇವಾ ಸಮಿತಿ ಫೋರ್ಟ್ ಇದರ ಅಧ್ಯಕ್ಷ ಡಾ.ಪ್ರಕಾಶ್ ಮೂಡಬಿದ್ರಿ ಯವರು ಆಗಮಿಸಲಿರುವರು.
ಈ ಸಂದರ್ಭದಲ್ಲಿ ಕೃತಿಯ ಲೇಖಕ, ಹೊಸ ಅಂಗಣ ಮಾಸ ಪತ್ರಿಕೆಯ ಸಂಪಾದಕ ಮುಲ್ಕಿ ಹರಿಶ್ಚಂದ್ರ ಪಿ ಸಾಲ್ಯಾನ್ ರವರನ್ನು ಸನ್ಮಾನಿಸಲಾಗುವುದು.
ಈ ಕಾರ್ಯಕ್ರಮದಲ್ಲಿ ಪುಸ್ತಕ ಪ್ರೇಮಿಗಳು, ಲೇಖಕರು ಹಾಗೂ ಸಾಲ್ಯಾನ್ ರವರ ಹಿತೈಷಿಗಳು ಉಪಸ್ಥಿತರಿರಬೇಕಾಗಿ ವಿದ್ಯಾದಾಯಿನಿ ಸಭಾದ ಗೌರವಾಧ್ಯಕ್ಷ ಜೆ.ಎಮ್.ಕೋಟ್ಯಾನ್, ಉಪಾಧ್ಯಕ್ಷ ಆರ್.ಕೆ.ಕೋಟ್ಯಾನ್, ಕಾರ್ಯದರ್ಶಿ ಹರೀಶ್ ಶಾಂತಿ, ಜತೆ ಕಾರ್ಯದರ್ಶಿ ಶರತ್ ಪೂಜಾರಿ, ಕೋಶಾಧಿಕಾರಿ ಗೋಪಾಲ್ ಪೂಜಾರಿ, ಜೊತೆ ಕೋಶಾಧಿಕಾರಿ ಶ್ರೀಧರ್ ಪೂಜಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಸಂತಿ ಆರ್.ಕೋಟ್ಯಾನ್, ಸೇವಾದಳದ ಜಿಒಸಿ ಸುರೇಶ್ ಪೂಜಾರಿ, ಭಜನಾ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಪೂಜಾರಿ,ಮಾಜಿ ಕಾರ್ಯದರ್ಶಿ ಚಿತ್ರಾಪು ಕೆ.ಎಮ್.ಕೋಟ್ಯಾನ್ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು, ಶಾಲಾ ಶಿಕ್ಷಕರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಜ.21 ರಂದು ವಸಾಯಿ ತಾಲೂಕು ಮೊಗವೀರ ಸಂಘ, ತುಳು-ಕನ್ನಡಿಗರಿಗಾಗಿ ವಾಲಿಬಾಲ್, ತ್ರೋಬಾಲ್ ಪಂದ್ಯಾಟ

Mumbai News Desk

ಕರ್ನಾಟಕ ಸಂಘ, ಕಲ್ಯಾಣ: 23 ರಂದು ಕರ್ನಾಟಕ ರಾಜ್ಯೋತ್ಸವ ಮತ್ತು 23ನೇ ವಾರ್ಷಿಕೋತ್ಸವ

Mumbai News Desk

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಮಹಿಳಾ ವಿಭಾಗ. ಅ. 4 ರಂದು ”ಆಟಿದ ಒಂಜಿ ಪೊರ್ಲು” ಕಾರ್ಯಕ್ರಮ.

Mumbai News Desk

ವಿದ್ಯಾವಿಹಾರ್ ಗಾಂವ್‌ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ : ಜೂನ್ 14ರಂದು ಶ್ರೀ ರಾಮ ಕಥಾ ಹೃದಯಂ ಸರಣಿ ತಾಳಮದ್ದಳೆ, ಸಮ್ಮಾನ.

Mumbai News Desk

ವಸಾಯಿ ಕರ್ನಾಟಕ ಸಂಘ : ಸ್ವಾತಂತ್ರೋತ್ಸವ ಸಂಭ್ರಮ, ದತ್ತು ಸ್ಪೀಕರ, ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Mumbai News Desk

ಜನವರಿ 2 ರಿಂದ 12 ರವರೆಗೆ ರಂಗ್ ದ ರಾಜೆ ಸುಂದರ್ ರೈ ಮಂದಾರ ಸಾರಥ್ಯದ ‘ಅಮ್ಮ ಕಲಾವಿದೆರ್ ಕುಡ್ಲ’ ತಂಡದಿಂದ ‘ಆನ್ ಮಗೆ’ ನಾಟಕದ ಮುಂಬೈ, ಪುಣೆ ಪ್ರದರ್ಶನ

Mumbai News Desk