August 26, 2026
Mumbai News Kannada
ಕರ್ನಾಟಕ

ಮೈಸೂರು ದಸರಾದಲ್ಲಿ ಕಂಬಳ ವೈಭವ: ವಿಧಾನಸೌಧದಲ್ಲಿ ಮಹತ್ವದ ಪೂರ್ವಭಾವಿ ಸಭೆ





ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬದ ಅಂಗವಾಗಿ ಈ ಬಾರಿ ಜಾನಪದ ಕ್ರೀಡೆ ಕಂಬಳ ಕೂಟವನ್ನು ನಡೆಸುವ ಕುರಿತು ಬೆಂಗಳೂರಿನ ವಿಧಾನಸೌಧದಲ್ಲಿ ಮಹತ್ವದ ಪೂರ್ವಭಾವಿ ಸಭೆ ಜರುಗಿತು. ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿ, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾದ ಚಂದ್ರಹಾಸ ಸಾದು ಸನಿಲ್, ಕಂಬಳ ಅಸೋಸಿಯೇಷನ್ ಪದಾಧಿಕಾರಿಗಳಾದ ವಿಜಯ ಕುಮಾರ್ ಕಂಗಿನಮನೆ, ಲೋಕೇಶ್ ಶೆಟ್ಟಿ ಮುಚ್ಚೂರುಕಲ್ಕುಡೆ, ಉದಯ ಕುಮಾರ್ ಮುನಿಯಾಲ್, ಪಿ. ಆರ್. ಶೆಟ್ಟಿ ಕೂಲೂರು ಪೊಯೆಲ್ ಹಾಗೂ ನವೀನ್‌ಚಂದ್ರ ಆಳ್ವ ತಿರುವೈಲು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.


ಸಭೆಯ ಬಳಿಕ ಕಂಬಳ ಸಮಿತಿಯ ನಿಯೋಗವು ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್, ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್. ಸಿ. ಮಹದೇವಪ್ಪ ಹಾಗೂ ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿತು. ಕರಾವಳಿಯ ಹೆಮ್ಮೆಯ ಸಂಸ್ಕೃತಿಯಾದ ಕಂಬಳವನ್ನು ಮೈಸೂರು ದಸರಾದಲ್ಲಿ ಅತ್ಯಂತ ಯಶಸ್ವಿಯಾಗಿ, ಶಿಸ್ತುಬದ್ಧವಾಗಿ ಮತ್ತು ವೈಭವೋಪೇತವಾಗಿ ಆಯೋಜಿಸುವ ನಿಟ್ಟಿನಲ್ಲಿ ಸಚಿವರೊಂದಿಗೆ ಸಮಾಲೋಚನೆ ನಡೆಸಿ, ಅಗತ್ಯ ಸಹಕಾರ ನೀಡುವ ಕುರಿತು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು.



Related posts

ಬಸ್ ಸಂಚಾರ ಸ್ಥಗಿತ: ಪಳ್ಳಿ-ನಿಂಜೂರು ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ

Mumbai News Desk

ಕಂಬಳದ ಸುಗಮ ಆಯೋಜನೆಗೆ ರಾಜ್ಯ ಸರ್ಕಾರದಿಂದ 1.15 ಕೋಟಿ ರೂ. ಭಾರಿ ಅನುದಾನ ಬಿಡುಗಡೆ: ಕರಾವಳಿಗರಿಗೆ ಸಿಹಿ ಸುದ್ಧಿ

Mumbai News Desk

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

Mumbai News Desk

ಕರ್ನಾಟಕ : ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

Mumbai News Desk

ಬೆಳಗಾವಿ : ಸದನದಲ್ಲಿ ಗೃಹಲಕ್ಷ್ಮಿ ಗದ್ದಲ; ತಪ್ಪೊಪ್ಪಿಕೊಂಡ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Mumbai News Desk

ಬಳ್ಳಾರಿ : ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

Mumbai News Desk