September 5, 2026
Mumbai News Kannada
ಪ್ರಕಟಣೆ

ಜು. 22: ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ 48 ವಾರಗಳ ಭಜನಾ ಸಂಕೀರ್ತನೆಯ ಮಂಗಳೋತ್ಸವ






​ಮುಂಬಯಿ: ಮಂಗಳೂರಿನ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ, ಕ್ಷೇತ್ರದ ಸೇವಾಕರ್ತ ಲೋಕೇಶ್ ಬಜಾಲ್ ಸಾರಥ್ಯದಲ್ಲಿ ಹಮ್ಮಿಕೊಳ್ಳಲಾಗಿರುವ 48 ವಾರಗಳ ಭಜನಾ ಸಂಕೀರ್ತನೆಯ ಅಂಗವಾಗಿ ಭಜನೆ ಮತ್ತು ಕುಣಿತ ಭಜನೆ ಕಾರ್ಯಕ್ರಮವು ಜುಲೈ 22ರ ಬುಧವಾರದಂದು ಬೆಳಿಗ್ಗೆಯಿಂದ ಸಂಜೆಯವರೆಗೆ ಶ್ರೀ ಕ್ಷೇತ್ರದ ರಾಜಾಂಗಣದಲ್ಲಿ ನಡೆಯಲಿದೆ. ಅಂದು ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ವಿವಿಧ ಭಜನಾ ಮಂಡಳಿಗಳಿಂದ ಅಖಂಡ ಭಜನಾ ಸೇವೆ ನಡೆಯಲಿದ್ದು, ಸಂಜೆ 7 ಗಂಟೆಗೆ ಶ್ರೀ ಮಹಾಗಣಪತಿ ಹಾಗೂ ಶ್ರೀ ವೀರನಾರಾಯಣ ದೇವರಿಗೆ ರಂಗಪೂಜೆ ನೆರವೇರಲಿದೆ.


​ಈ ಪುಣ್ಯ ಕಾರ್ಯಕ್ರಮದ ಸೇವಾಕರ್ತರಾಗಿ ಮುಂಬಯಿಯ ಸಮಾಜ ಸೇವಕಿ ಹಾಗೂ ಮುಂಬೈ ಕುಲಾಲ ಸಂಘದ ಚರ್ಚ್ ಗೇಟ್-ದಹಿಸರ್ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರತ್ನಾ ಡಿ. ಕುಲಾಲ್, ಪತ್ರಕರ್ತ ಬಿ. ದಿನೇಶ್ ಕುಲಾಲ್ ಹಾಗೂ ಕಾನೂನು ವಿದ್ಯಾರ್ಥಿನಿ ಲಾಸ್ಯಾ ಡಿ. ಕುಲಾಲ್ ಭಾಗವಹಿಸಲಿದ್ದಾರೆ.


​ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ವೀರನಾರಾಯಣ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದ.ಕ. ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾದ ಮಯೂರ್ ಉಳ್ಳಾಲ್ ಮತ್ತು ಸರ್ವ ಸದಸ್ಯರು, ಕ್ಷೇತ್ರದ ಆಡಳಿತ ಮೊಕ್ತೇಸರರಾದ ಕೆ. ಸುಂದರ್ ಕುಲಾಲ್ ಶಕ್ತಿನಗರ ಮತ್ತು ಸರ್ವ ಸದಸ್ಯರು, ಸೇವಾ ಸಮಿತಿಯ ಅಧ್ಯಕ್ಷರಾದ ಕಿರಣ್ ಅಟ್ಲೂರು ಮತ್ತು ಸರ್ವ ಸದಸ್ಯರು ಹಾಗೂ ದೇವಸ್ಥಾನದ ಮಾತೃ ಮಂಡಳಿಯ ಅಧ್ಯಕ್ಷೆ ಮಮತಾ ದೇವದಾಸ್ ಮತ್ತು ಸರ್ವ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಕುಲಾಲ ಸಂಘ ಮುಂಬಯಿ: ನವಿ ಮುಂಬಯಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗ – ಪೆ 15.: ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ಜ 5 ರಂದು ಕೆಲ್ಲಪುತ್ತಿಗೆ ಶ್ರೀ ಧರ್ಮಶಾಸ್ತ ಭಕ್ತವೃಂದ ದ21ನೇ ವರ್ಷದಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಯಕ್ಷಗಾನ ಪ್ರದರ್ಶನ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬಯಿ – ಜು. 20ಕ್ಕೆ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ, ಯಕ್ಷಗಾನ ಪ್ರದರ್ಶನ

Mumbai News Desk

ಮಾ.15 ರಂದು ಮಹಾನಗರ ಕನ್ನಡ ಸಂಸ್ಥೆ ಡೊಂಬಿವಲಿ ವತಿಯಿಂದ ಜಾಗತಿಕ ಮಹಿಳಾ ದಿನಾಚರಣೆ

Mumbai News Desk

ಸಾಫಲ್ಯ ಸೇವಾ ಸಂಘ, ಮುಂಬಯಿ ಇದರ ದೀಪಾವಳಿ ಸಾಹಿತ್ಯ ಸ್ಪರ್ಧೆ 2024 : ಸಣ್ಣ ಕಥೆ ಮತ್ತು ಲೇಖನಗಳ ಸ್ಪರ್ಧೆ

Mumbai News Desk

ದಹಿಸರ್ ಪೂರ್ವ, ರಾವಲ್ಪಾಡ: ಶ್ರೀ ಶನೀಶ್ವರ ಚಾಮುಂಡೇಶ್ವರಿ ಮಂದಿರದಲ್ಲಿ ಆ. 22ರಂದು 27ನೇ ವರ್ಷದ ಶ್ರೀ ಶನಿಗ್ರಂಥ ಪಾರಾಯಣ ಪೂಜೆ

Mumbai News Desk