October 24, 2026
Mumbai News Kannada
ಸುದ್ದಿ

ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿ: ಹಿರಿಯ ಪತ್ರಕರ್ತ ಜಯಾನಂದ ಪೆರಾಜೆಗೆ ಗೌರವ



ಅಖಿಲ ಭಾರತೀಯ ಸಾಹಿತ್ಯ ಪರಿಷತ್ ,ಕನ್ನಡ ಸಾಹಿತ್ಯ ಪರಿಷತ್,ಕನ್ನಡ ಚುಟುಕು ಸಾಹಿತ್ಯ ಪರಿಷತ್, ಬರಹಗಾರರ ಸಂಘ ,ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಗಳ ಅಧ್ಯಕ್ಷ ರಾಗಿ ನಿರಂತರವಾಗಿ ಕನ್ನಡಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಪತ್ರಕರ್ತಸಾಹಿತಿ ಜಯಾನಂದ ಪೆರಾಜೆಯವರನ್ನು 2026ನೇ ಸಾಲಿನ ಸಾಲಿನ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ಸಮಿತಿ ಅಧ್ಯಕ್ಷ ಡಾ.ಕೆ.ಎನ್.ವೆಂಕಟರಮಣ ಹೊಳ್ಳ ಮತ್ತು ಕಾಸರಗೋಡು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ.ವಾಮನ ರಾವ್ ಬೇಕಲ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‌ಅವರು ಕನ್ನಡ ಭಾಷಾ ಶಿಕ್ಷಕರಾಗಿ,ಉಪನ್ಯಾಸಕರಾಗಿ ಕಳೆದ 40 ವರ್ಷಗಳಿಂದ ಜವಾಬ್ದಾರಿಯುತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಪ್ರಮುಖ ಪತ್ರಿಕೆಗಳಲ್ಲಿ ಪತ್ರಕರ್ತರಾಗಿದ್ದು ಲೇಖನಗಳ ಮೂಲಕ ಪರಿಚಿತರಾಗಿದ್ದಾರೆ. ರಾಷ್ಟ್ರ ಮಟ್ಟದ ಹಲವು ಕವಿಗೋಷ್ಠಿಯಲ್ಲಿ ಭಾಗವಹಿಸಿ ಚುಟುಕು ಕವನ ಸಂಕಲನಗಳನ್ನು ಹೊರತಂದಿದ್ದಾರೆ. ಬಹುಮುಖ ವ್ಯಕ್ತಿತ್ವದ ಪ್ರತಿಭಾವಂತ,ಕಲಾವಿದ, ನಿರ್ದೇಶಕರಾಗಿ, ಕ್ರೀಯಾಶೀಲ ತರಬೇತುದಾರರಾಗಿ,ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ. ಜೇಸಿ,ಎಸ್.ಸಿ.ಐ. ಲಯನ್ಸ್ ಕ್ಲಬ್ ಹಾಗೂ ಹಲವು ಸಾಮಾಜಿಕ ಸಂಘಟನೆಯಲ್ಲಿ ತೊಡಗಿಸಿಕೊಂಡು ರಾಷ್ಟ್ರ, ಸಾಮಾಜಿಕ ಕಾರ್ಯದಲ್ಲಿ ಅವಿರತ ತೊಡಗಿಸಿಕೊಂಡಿರುವ ಪೆರಾಜೆಯವರ ಬಹುಮುಖಿ ಸೇವೆಯನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದು ಆಯ್ಕೆ ಸಮಿತಿ ಪ್ರಕಟಣೆ ತಿಳಿಸಿದೆ.
ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.



Related posts

ಕಾಪು ಶ್ರೀ ಹೊಸಮಾರಿಗುಡಿ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮುದಾಯಕ್ಕೆ ಅವಕಾಶ ನೀಡಬೇಕು : ಕಾಪು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವೈ. ಸುಕುಮಾರ್.

Mumbai News Desk

ಇರಾನ್-ಅಮೆರಿಕ ಸಂಘರ್ಷ: ಶಾಂತಿ ಮಾತುಕತೆ ವಿಫಲ ಮತ್ತೆ ಯುದ್ಧದ ಅಂಚಿನಲ್ಲಿ ಮಧ್ಯಪ್ರಾಚ್ಯ

Mumbai News Desk

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಎಸ್.ಕೋಡಿ ತೋಕೂರಿನಲ್ಲಿ ಬೇಸಿಗೆ ಶಿಬಿರ – ಚಿನ್ನರ ಹಬ್ಬ-2025ಕ್ಕೆ ಚಾಲನೆ

Mumbai News Desk

ಕುಲಾಲ ಸಂಘ ಮುಂಬೈ  ಅಧ್ಯಕ್ಷರಾಗಿ ಮರು ಆಯ್ಕೆಗೊಂಡ   ರಘು ಮೂಲ್ಯ ಪಾದೆಬೆಟ್ಟು ಅವರಿಗೆ ಮಂಗಳೂರುನಲ್ಲಿ  ಗೌರವ,

Mumbai News Desk

ನಿಟ್ಟೆಗುತ್ತು ಸುಮಿತ್ರಾ ಆರ್. ಶೆಟ್ಟಿ ನಿಧನ

Mumbai News Desk

ಹೆಜಮಾಡಿ : ಸಾವಿತ್ರಿ ಡಿ ಸಾಲ್ಯಾನ್ ನಿಧನ

Mumbai News Desk