28 C
Mumbai
September 18, 2026
Mumbai News Kannada
ಸುದ್ದಿ

ಉಡುಪಿ: ಖಾಸಗಿ ಬಸ್ ಢಿಕ್ಕಿ ಹೊಡೆದು ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮಿ ಕೊಳ ದಾರುಣ ಸಾವು





ಉಡುಪಿಯ ಕೋರ್ಟ್ ರಸ್ತೆ ಬಳಿ ಶನಿವಾರ (ಅ.1)ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮಿ ಕೊಳ ಅವರು ದುರಂತವಾಗಿ ಸಾವನ್ನಪ್ಪಿದ್ದಾರೆ. ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಅವರಿಗೆ ಮುಖಾಮುಖಿ ಢಿಕ್ಕಿ ಹೊಡೆದು, ಬಸ್ಸಿನ ಚಕ್ರಗಳು ಅವರ ಮೈಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತ ಲಕ್ಷ್ಮಿ ಅವರು ಬಿಜೆಪಿ ಮುಖಂಡ ಮಂಜು ಕೊಳ ಅವರ ಧರ್ಮಪತ್ನಿಯಾಗಿದ್ದಾರೆ. ಈ ಭೀಕರ ದುರಂತದ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.



Related posts

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ,  ಡಿ.1 – ವಿಶ್ವನಾಥ ಯು. ಮಾಡಾ ನಿಧನಕ್ಕೆ ಶ್ರದ್ದಾಂಜಲಿ ಸಭೆ

Mumbai News Desk

ಮುಂಬೈ ಲೋಕಲ್ ಟ್ರೈನ್ ಕೊಲೆ: ಸಿಸಿಟಿವಿ ದೃಶ್ಯದಲ್ಲಿದ್ದ ಒಂದೇ ಒಂದು ಲೋಗೋ ತಂದುಕೊಟ್ಟಿತು ಮಂಗಳೂರು ಮೂಲದ ಕೊಲೆಗಾರನ ಸುಳಿವು!

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (10/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

“ಕಾಂತಾರ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (15/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಬಾಂಡೂಪ್: ಶೇಖರ್ ನಾಯ್ಕ್ ನಿಧನ

Mumbai News Desk