ಉಡುಪಿ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.), ಉಡುಪಿ ಇದರ ನೇತೃತ್ವದಲ್ಲಿ ಆಗಸ್ಟ್ 30ರಂದು ನಡೆಯಲಿರುವ ಗುರು ಸಾಮರಸ್ಯ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯ ಆಮಂತ್ರಣ ಪತ್ರಿಕೆಯನ್ನು ಬನ್ನಂಜೆಯ ಬಿಲ್ಲವರ ಸೇವಾ ಸಂಘದಲ್ಲಿ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾದ ಪ್ರವೀಣ್ ಎಂ. ಪೂಜಾರಿ ವಹಿಸಿ, ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬನ್ನಂಜೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾದ ಶಶಿಧರ್ ಅಮೀನ್, ಬ್ರಹ್ಮಾವರ ಬಿಲ್ಲವ ಸಂಘದ ಅಧ್ಯಕ್ಷರಾದ ಬಿನ್ ಎನ್. ಶಂಕರ ಪೂಜಾರಿ, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಮಹೇಶ್ ಅಂಚನ್, ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾದ ಪ್ರಮಾಳ್ ಕುಮಾರ್, ಕುಂದಾಪುರ ಬಿಲ್ಲವ ಸಂಘದ ಅಧ್ಯಕ್ಷರಾದ ಅಶೋಕ್ ಪೂಜಾರಿ, ಬ್ರಹ್ಮ ಬೈದೆರ್ಕಳ ಅಧ್ಯಯನ ಸಂಸ್ಕೃತಿಕ ಕೇಂದ್ರ ಉಡುಪಿಯ ಅಧ್ಯಕ್ಷರು ಸೂರ್ಯೋದಯ ಪರಂಪಳ್ಳಿ,ವೇದಿಕೆಯ ಗೌರವಾಧ್ಯಕ್ಷರಾದ ದಿವಾಕರ್ ಸನಿಲ್ ಹಾಗೂ ಹಿರಿಯ ಗೌರವ ಸಲಹೆಗಾರರಾದ ಸುಧಾಕರ್ ಡಿ. ಪಾಂಗಾಳ ಉಪಸ್ಥಿತರಿದ್ದರು.
ಇದಲ್ಲದೆ, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಗೌರವ ಸಲಹೆಗಾರರು, ಉಡುಪಿ ಜಿಲ್ಲೆಯ ವಿವಿಧ ಬಿಲ್ಲವ ಸಂಘಗಳ ಅಧ್ಯಕ್ಷರು, ಗುರುಗಳ ಅನುಯಾಯಿಗಳು ಹಾಗೂ ಗುರು ಸಾಮರಸ್ಯ ಜಾಥಾದ ಸಂಚಾಲಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವೇದಿಕೆಯ ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಮಲ್ಪೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಅಜೇಯ ಪೂಜಾರಿ ಮೇಲ್ಮನೆ ವಂದಿಸಿದರು.
ಗುರು ಸಾಮರಸ್ಯ, ಸಾಮಾಜಿಕ ಏಕತೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ನಡೆಯಲಿರುವ ಈ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾರ್ಯಕ್ರಮದ ಸಂಘಟಕರು ಮನವಿ ಮಾಡಿದರು. ಸುರೇಶ್ ಪೂಜಾರಿ ನಿರೂಪಿಸಿದರು.




