28 C
Mumbai
September 27, 2026
Mumbai News Kannada
ತುಳುನಾಡು

ಜೇಸಿಐ ಕಾಪು ಘಟಕ : ಶಾಶ್ವತ ಯೋಜನೆಯಾಗಿ ಕಾಪು ಪೊಲೀಸ್ ಠಾಣೆಗೆ 2 ಬ್ಯಾರಿಕೇಡ್ ಹಸ್ತಾಂತರ



ವಲಯಾಧ್ಯಕ್ಷರ ಅಧಿಕೃತ ಭೇಟಿ ಹಾಗೂ ‘ಆಟಿದ ತಮ್ಮನ’ ತುಳು ಪಾರಂಪರಿಕ ಆಚರಣೆ

ಕಾಪು: ಜೇಸಿಐ ವಲಯ 15ರ ಘಟಕಗಳಲ್ಲಿ ಒಂದಾಗಿರುವ ಜೇಸಿಐ ಕಾಪು ಘಟಕದ ವಲಯಾಧ್ಯಕ್ಷರ ಅಧಿಕೃತ ಭೇಟಿಯ ಅಂಗವಾಗಿ, ಜೇಸಿಐ ಕಾಪು ಘಟಕ ಹಾಗೂ ಗ್ರೀನ್‌ವುಡ್ ರೆಸಾರ್ಟ್ ವತಿಯಿಂದ ವಲಯಾಧ್ಯಕ್ಷ ಸಂತೋಷ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಕಾಪು ಪೊಲೀಸ್ ಠಾಣೆಗೆ 2 ಬ್ಯಾರಿಕೇಡ್‌ಗಳನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ಪೊಲೀಸ್ ಠಾಣೆಯ ಪೊಲೀಸ್ ತನಿಖಾಧಿಕಾರಿ ಶುಭಕರ್ವಲಯ ಅಧ್ಯಕ್ಷರ ಅಧಿಕೃತ ಬೇಟಿ

ವಲಯಧ್ಯಕ್ಷರಾದ jfs ಸಂತೋಷ್ ಶೆಟ್ಟಿ

ವಲಯ ಉಪಾಧ್ಯಕ್ಷ JFD ಅರುಣ್ ಮಂಜ

Ea to zp JFP ಲೂಯಿಸ್ ಮಸ್ಕರೇನಸ್

ಕಾಪು ಪೊಲೀಸ್ ತನಿಖಾಧಿಕಾರಿ ಶುಭಕರ್ ಮತ್ತು ಸಹಾಯಕ ಪೊಲೀಸ್ ಉಪ ನಿರೀಕ್ಷಕ ರವೀಶ್ ಹೊಳ್ಳ ಅವರು ಕೃತಜ್ಞತೆ ಸಲ್ಲಿಸಿದರು.

ಬಳಿಕ ವಲಯಾಧ್ಯಕ್ಷರ ಅಧಿಕೃತ ಭೇಟಿ ಪ್ರಯುಕ್ತ ಸಭಾ ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ವಲಯ ಅಧ್ಯಕ್ಷ ಸಂತೋಷ್ ಶೆಟ್ಟಿ ಅವರು, ಜೇಸಿಐ ಕಾಪು ಘಟಕದ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಈ ಹಿಂದೆ ಕಾಪು ಘಟಕದ ಆತಿಥ್ಯದಲ್ಲಿ ನಡೆದ ಮಧ್ಯಂತರ ವಲಯ ಸಮ್ಮೇಳನದ ಯಶಸ್ಸನ್ನು ಸ್ಮರಿಸಿದ ಅವರು, ಮುಂದಿನ ದಿನಗಳಲ್ಲಿಯೂ ಘಟಕವು ಇನ್ನಷ್ಟು ಉತ್ತಮ ಹಾಗೂ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವಂತೆ ಪ್ರೇರೇಪಿಸಿದರು.

ತುಳುನಾಡಿನ ಸಂಸ್ಕೃತಿಯ ಅನಾವರಣಕ್ಕಾಗಿ ತುಳುನಾಡಿನ ಸಾಂಪ್ರದಾಯಿಕ ‘ಆಟಿದ ತಮ್ಮನ’ ಆಚರಣೆಯನ್ನು ವಿಶಿಷ್ಟವಾಗಿ ನೆರವೇರಿಸಲಾಯಿತು. ಅತಿಥಿಗಳನ್ನು ತುಳುನಾಡಿನ ಸಾಂಪ್ರದಾಯಿಕ ಶಾಲು ಹೊದಿಸಿ, ವೀಳ್ಯದೆಲೆ-ಅಡಿಕೆ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಕಲಸೆಗೆ ಕುರುವೆಯಲ್ಲಿ ಅಕ್ಕಿಯನ್ನು ತುಂಬಿಸಿ, ಹಿಂಗಾರವನ್ನು ಇರಿಸುವ ಮೂಲಕ ಕಾರ್ಯಕ್ರಮಕ್ಕೆ ಸಾಂಪ್ರದಾಯಿಕ ರೀತಿಯಲ್ಲಿ ಚಾಲನೆ ನೀಡಲಾಯಿತು. ಬಳಿಕ ತುಳುವಪ್ಪೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ತುಳುನಾಡಗೀತೆಯ ಸಂದರ್ಭದಲ್ಲಿ ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸಿದರು.

ಪೂರ್ವ ವಲಯ ಅಧ್ಯಕ್ಷ ರಾಕೇಶ್ ಕುಂಜೂರು ಅವರು ತುಳುವರ ಆಟಿ ತಿಂಗಳು ಹಾಗೂ ಅದರ ವಿಶೇಷ ಆಚರಣೆಗಳ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಲಯಾಧ್ಯಕ್ಷರಾಗಿ ಭೇಟಿ ನೀಡಿದ ಯಶಸ್ವಿ ನಾಯಕ ಸಂತೋಷ್ ಶೆಟ್ಟಿ ಮತ್ತು ಜೇಸಿಐ ಆಯೋಜಿಸುವ ಮೌನ ಸಾಧಕರ ಸಾಧನೆಯ ಸನ್ಮಾನಕ್ಕಾಗಿ ರಾಷ್ಟ್ರಮಟ್ಟದಲ್ಲಿ ಕ್ರೀಡಾ ಸಾಧನೆ ಮಾಡಿರುವ ಗಾಯನ್ ಸಿ. ಸುವರ್ಣ ಹಾಗೂ “ಆಟಿದ ತಮ್ಮನ” ಅಂಗವಾಗಿ ತುಳು ಲಿಪಿ ಕಲಿಕೆಗೆ ವಿಶೇಷ ಕೊಡುಗೆ ನೀಡಿರುವ ಅಕ್ಷತಾ ಜ್ಞಾನೇಶ್ ಕುಲಾಲ್ ಅವರನ್ನು ಸನ್ಮಾನಿಸಲಾಯಿತು.

ತುಳು ಭಾಷೆ ಹಾಗೂ ತುಳುನಾಡಿನ ಸಂಸ್ಕೃತಿಗೆ ಸಂಬಂಧಿಸಿದ ವಿವಿಧ ಪ್ರಶ್ನೆಗಳನ್ನು ಕೇಳಲಾಗಿದ್ದು, ಸರಿಯಾದ ಉತ್ತರ ನೀಡಿದವರಿಗೆ ಬಹುಮಾನ ವಿತರಿಸಲಾಯಿತು. ಘಟಕದ ಸದಸ್ಯರು ತಮ್ಮ ಮನೆಗಳಲ್ಲಿ ಸಿದ್ಧಪಡಿಸಿ ತಂದಿದ್ದ ವಿವಿಧ ಬಗೆಯ ಸಾಂಪ್ರದಾಯಿಕ ತುಳುನಾಡಿನ ಖಾದ್ಯಗಳನ್ನು ಅತಿಥಿಗಳಿಗೆ ಉಣಬಡಿಸಲಾಯಿತು.

ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷ ಅರುಣ್ ಮಾಂಜ, ವಲಯ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಲೂಯಿಸ್ ಮಸ್ಕರೇನಸ್, ನಿಕಟಪೂರ್ವ ಅಧ್ಯಕ್ಷೆ ಅನಿತಾ ಹೆಗ್ಡೆ, ಕಾರ್ಯದರ್ಶಿ ಶೃತಿ ಶೆಟ್ಟಿ, ಲೇಡಿ ಜೆಸಿ ಸಂಯೋಜಕಿ ಕವಿತಾ ಕುಂದರ್, ‘ಆಟಿದ ತಮ್ಮನ’ ನಿರ್ದೇಶಕಿ ಸುಖಲಾಕ್ಷಿ ಬಂಗೇರ, ಸಹ ನಿರ್ದೇಶಕಿ ಸತ್ಯವತಿ ಬಂಗೇರ, ಜೂನಿಯರ್ ಜೆಸಿ ಅಧ್ಯಕ್ಷ ಮನ್ವಿತ್ ಬಂಗೇರ ಸೇರಿದಂತೆ ಜೇಸಿಐ ಕಾಪು ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.



Related posts

ಉಳ್ಳೂರು: ಶ್ರೀ ದುರ್ಗಾಪರಮೇಶ್ವರಿ ಸನ್ನಿಧಾನದ 19ನೇ ವರ್ಧಂತಿ ಮಹೋತ್ಸವ ಸಂಪನ್ನ

Mumbai News Desk

ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ

Mumbai News Desk

ಹೆಜಮಾಡಿ ಕೋಡಿಕರೆ ಬಿಲ್ಲವರ ಸಮಿತಿ – ವಿದ್ಯಾರ್ಥಿವೇತನ ವಿತರಣಾ ಹಾಗೂ ಪ್ರತಿಭಾ ಪುರಸ್ಕಾರ

Mumbai News Desk

ಮೊಗವೀರ ಮಹಾಸಭಾ ಹೆಜಮಾಡಿ ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ, ಸಮಾಜ ಸೇವಕ ಹರೀಶ್ ಕೋಟ್ಯಾನ್ ಆಯ್ಕೆ

Mumbai News Desk

ಮಲ್ಪೆ- ಕಡಲ ಮಕ್ಕಳಿಂದ ಸಂಭ್ರಮದ ಸಮುದ್ರ ಪೂಜೆ.

Mumbai News Desk

ಕನ್ನಡ ಕಿರುತೆರೆ ನಟಿ, ‘ಬಿಗ್ ಬಾಸ್’ ಖ್ಯಾತಿಯ ಕಾವ್ಯ ಶಾಸ್ತ್ರೀ ಅವರಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಿಗೆ ವಿಶೇಷ ಪೂಜೆ: ನವದುರ್ಗಾ ಲೇಖನ ಸಮರ್ಪಣೆ

Mumbai News Desk