30 C
Mumbai
September 26, 2026
Mumbai News Kannada
ಮುಂಬಯಿ

ಮುಂಬೈನಲ್ಲಿ ಸುರಿದ ಭಾರಿ ಮಳೆಗೆ ಕುರ್ಲಾ ಬಳಿ ಭೂಕುಸಿತ: ಇಬ್ಬರ ಸಾವು, 6ರಿಂದ 8 ಜನರು ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ



ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಿನ ಜಾವ ಘಾಟ್‌ಕೋಪರ್-ಕುರ್ಲಾ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಇಬ್ಬರು ಜೀವ ಕಳೆದುಕೊಂಡಿದ್ದಾರೆ. ಬುಧವಾರ ಮುಂಜಾನೆ ಸುಮಾರು 3:00ರಿಂದ 3:48ರ ಅವಧಿಯಲ್ಲಿ ಕುರ್ಲಾದ ಚಿರಾಾಗ್ ನಗರ ಹಾಗೂ ಅಶೋಕನಗರ ಭಾಗದಲ್ಲಿ ಈ ದುರಂತ ಸಂಭವಿಸಿದೆ. ರಾತ್ರಿಯ ಕತ್ತಲು ಮತ್ತು ಧಾರಾಕಾರ ಮಳೆಯ ಕಾರಣ ಜನರಿಗೆ ತಕ್ಷಣವೇ ಸುರಕ್ಷಿತ ಸ್ಥಳಕ್ಕೆ ತೆರಳಲು ಸಾಧ್ಯವಾಗದೆ ಹಲವು ಮನೆಗಳು ಮಣ್ಣಿನಡಿಯಲ್ಲಿ ಸಿಲುಕಿ ಜಜ್ಜುಗೆೊಂಡಿವೆ.
ಘಟನಾ ಸ್ಥಳದಿಂದ ಇದುವರೆಗೆ ಇಬ್ಬರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಮಣ್ಣಿನ ಅಡಿಯಲ್ಲಿ ಇನ್ನು 6ರಿಂದ 8 ಜನರು ಸಿಲುಕಿಕೊಂಡಿದ್ದಾರೆ ಎಂದು ಬೃಹನ್‌ಮುಂಬೈ ಮಹಾನಗರ ಪಾಲಿಕೆ (BMC) ತಿಳಿಸಿದೆ. ಪ್ರಸ್ತುತ ಸ್ಥಳದಲ್ಲಿ ಎನ್‌ಡಿಆರ್‌ಎಫ್ (NDRF), ಮುಂಬೈ ಅಗ್ನಿಶಾಮಕ ದಳ, ಮುಂಬೈ ಪೊಲೀಸ್, ಸ್ಥಳೀಯ ಪಾಲಿಕೆ ಸಿಬ್ಬಂದಿ ಹಾಗೂ 108 ಆಂಬುಲೆನ್ಸ್ ತಂಡಗಳು ಯುದ್ಧೋಪಾದಿಯಲ್ಲಿ ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ.



Related posts

ಕಾಪು ಮೊಗವೀರ ಮಹಿಳಾ ಮಂಡಳಿ, ಮುಂಬಾಯಿ ಇವರ ವತಿಯಿಂದ “ಆಟಿದ ಒಂಜಿ ಕೂಟ” ಹಾಗೂ “ಅಭಿನಂದನಾ ಕಾರ್ಯಕ್ರಮ”

Mumbai News Desk

ಸೇವಾ ಪಥದಲ್ಲಿ ಮೂರು ದಶಕ: ಭಾರತ್ ಬ್ಯಾಂಕ್ ಬಾಂದ್ರಾ ಪೂರ್ವ ಶಾಖೆಯ 30ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ 19 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ.

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ  ಅಯ್ಯಪ್ಪ ಸ್ವಾಮಿ ಗೆ ಅಪ್ಪ ಸೇವೆ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪದ್ಮವಿಭೂಷಣ ಜಾರ್ಜ್ ಫರ್ನಾಂಡಿಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ-2025 ಪ್ರದಾನ ಸಮಾರಂಭ,

Mumbai News Desk

ಬಿಲ್ಲವರ ಅಸೋಸಿಯೇಷನ್ ಬೊರಿವಿಲಿ ದಹಿಸರ್ ಸ್ಥಳೀಯ ಕಚೇರಿ ತುಳು ಸಂಪ್ರದಾಯ ಕಾರ್ಯಕ್ರಮ ಆಟಿಡೊಂಜಿ ಕೂಟ

Mumbai News Desk