30 C
Mumbai
August 16, 2026
Mumbai News Kannada
ತುಳುನಾಡು

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಕಾಪು ವಲಯ ಅಧ್ಯಕ್ಷರಾಗಿ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ ಆಯ್ಕೆ





ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ಕಾಪು ವಲಯದ ನೂತನ ಕಾರ್ಯಕಾರಿ ಸಮಿತಿ ರಚಿಸಲು ಆಗಸ್ಟ್ 14 ರಂದು ಸಂಜೆ 4.00 ಗಂಟೆಗೆ ಕಾಪು JCI ಭವನದಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು.
ಸಭೆಯಲ್ಲಿ ತುಳುವರ್ಲ್ಡ್ ಫೌಂಡೇಶನ್, ಕಟೀಲು ಇದರ ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು, ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಉಡುಪಿ ಜಿಲ್ಲಾಧ್ಯಕ್ಷ ಉದಯ ಕುಮಾರ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ವಸಂತ ರೈ ಕುತ್ತೆತ್ತೂರು, ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಪ್ರಧಾನ ಕಾರ್ಯದರ್ಶಿ ಅರವಿಂದ ಬೆಲ್ಚಡ ಉಪಸ್ಥಿತರಿದ್ದರು.

ತುಳುವರ್ಲ್ಡ್ ಫೌಂಡೇಶನ್, ಕಟೀಲು ನಿರ್ದೇಶಕ ಡಾ. ರಾಜೇಶ್ ಕೃಷ್ಣ ಆಳ್ವ ಅವರು ತುಳುವರ್ಲ್ಡ್ ಫೌಂಡೇಶನ್ ಹಾಗೂ ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ಉದ್ದೇಶಗಳು, ಕಾರ್ಯವೈಖರಿ, ಪಾತ್ರ ಹಾಗೂ ಜವಾಬ್ದಾರಿಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು.

ಬಳಿಕ ನಡೆದ ಸಮಾಲೋಚನೆಯಲ್ಲಿ ಸದಸ್ಯರೆಲ್ಲರ ಸರ್ವಾನುಮತದೊಂದಿಗೆ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

ಗೌರವಾಧ್ಯಕ್ಷ ಯೋಗೇಶ್ ಶೆಟ್ಟಿ ಬಾಲಾಜಿ, ಅಧ್ಯಕ್ಷ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಉಪಾಧ್ಯಕ್ಷರುಗಳು ರಾಕೇಶ್ ಕುಂಜೂರು, ಪ್ರಭಾತ್ ಶೆಟ್ಟಿ ಮೂಳೂರು, ಶಿವಣ್ಣ ಬಾಯಾರ್, ಪ್ರಶಾಂತ್ ಶೆಟ್ಟಿ ಕುರ್ಕಾಲು, ಡಾ. ನಿರಂಜನ್ ಶೆಟ್ಟಿ, ವಲಯದ ಪ್ರಧಾನ ಸಂಚಾಲಕ ವಿಕ್ಕಿ ಪೂಜಾರಿ ಮಡುಂಬು, ಸಂಚಾಲಕ ದಿನೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್, ಯುವ ಘಟಕ ಅಧ್ಯಕ್ಷೆ
ಜಯಲಕ್ಷ್ಮಿ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಶೆಟ್ಟಿ, ಮಹಿಳಾ ಉಪಾಧ್ಯಕ್ಷರು ವಿಜಯಲಕ್ಷ್ಮಿ ಆಚಾರ್ಯ, ಸುಮ ಶೆಟ್ಟಿ ಕುರ್ಕಾಲು, ಪ್ರಧಾನ ಕಾರ್ಯದರ್ಶಿ ಶ್ವೇತಾ ಎಲ್. ಶೆಟ್ಟಿ, ಜೊತೆ ಕಾರ್ಯದರ್ಶಿ ಸುಜಾತ ಸುವರ್ಣ, ಶ್ರೀಮತಿ ದೀಕ್ಷಾ ಶೆಟ್ಟಿ ಆಯ್ಕೆಯಾಗಿರುತ್ತಾರೆ.

ಸಮಿತಿ ರಚನೆಯ ಬಳಿಕ ಉದಯ ಕುಮಾರ್ ಹೆಗ್ಡೆ ಹಾಗೂ ಭಾನುಮತಿ ಶೆಟ್ಟಿ ಕಕ್ವಗುತ್ತು ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಶಾಲು ಹೊದಿಸಿ ಅಭಿನಂದಿಸಿ, ಅವರ ಮುಂದಿನ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು.

ಸಂತೋಷ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿ, ಧನ್ಯವಾದಗೈದರು..



Related posts

ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರ ಸಮಾಲೋಚನಾ ಸಭೆ, ಆ. 31ರಂದು ಮುಷ್ಟಿ ಕಾಣಿಕೆ ಅರ್ಪಿಸಲು ನಿರ್ಣಯ

Mumbai News Desk

ಹೊಸ ಅಂಗಣ ಪತ್ರಿಕೆಯ ತಿಂಗಳ ಬೆಳಕು ಹಾಗೂ ಸಾಧಕರ ಗೌರವಾರ್ಪಣೆ: ಕಾರ್ಮಿಕರು ಶ್ರಮ ಮತ್ತು ಪರೋಪಕಾರಿ ಜೀವನದ ನಿಜವಾದ ಸಾಧಕರು – ಡಾ.ಹರಿಕೃಷ್ಣ ಪುನರೂರು

Mumbai News Desk

ಮೂಲ್ಕಿ: ಕಾರ್ನಾಡು ಸಿ.ಎಸ್.ಐ ಶಾಲೆಯಲ್ಲಿ ಪರಿಸರ ದಿನಾಚರಣೆ ಮತ್ತು ಸಸಿ ನೆಡುವ ಕಾರ್ಯಕ್ರಮ

Mumbai News Desk

ಪಡುಬಿದ್ರಿಯಲ್ಲಿ ಸೆರಾಕೇರ್ ವತಿಯಿಂದ ಸಡಗರದ ‘ಆಟಿದೊಂಜಿ ದಿನ’

Mumbai News Desk

ಹೆಜಮಾಡಿ ಕುದುರೆ ಜಾರಂದಾಯ ದೈವಸ್ಥಾನ – ವಾರ್ಷಿಕ ಬಂಡಿ ನೇಮೋತ್ಸವ ಸಂಪನ್ನ

Mumbai News Desk

ಗುರುಪುರ ಬಂಟರ ಮಾತೃ ಸಂಘ – ಹನ್ನೊಂದನೇ ವಾರ್ಷಿಕ ಸಮಾವೇಶ

Mumbai News Desk