October 9, 2026
Mumbai News Kannada
ಸುದ್ದಿ

12 ನೇ ಮೂಲತ್ವ ವಿಶ್ವ ಪ್ರಶಸ್ತಿ–2026ರ ಆಮಂತ್ರಣ ಪತ್ರಿಕೆ ಬಿಡುಗಡೆ



ಮಂಗಳೂರು, ಆ. 21: ಸಮಾಜಸೇವೆ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಗೌರವಿಸುವ ಮೂಲತ್ವ ವಿಶ್ವ ಪ್ರಶಸ್ತಿ–2026ರ ಆಹ್ವಾನ ಪತ್ರಿಕೆಯನ್ನು ಶುಕ್ರವಾರ ಮಂಗಳೂರಿನಲ್ಲಿ ಶ್ರೀ ಜಯಕುಮಾರ್ ಇವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು
ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯಂತ್ ನಡುಬೈಲ್, ಶ್ರೀ
ಶ್ರೀ ನವೀನ್ ಗುಳ್ಳಿಬೆಟ್ಟು, ಮೂಲತ್ವ ಫೌಂಡೇಶನ್‌ನ ಸಂಸ್ಥಾಪಕರಾದ ಶ್ರೀ ಪ್ರಕಾಶ್ ಮೂಲತ್ವ, ಎನ್.ಡಿ. ಸನ್ಸ್ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಎಂ. ಡಿ. ಪೂಜಾರಿ, ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧ್ಯಕ್ಷರಾದ ಶ್ರೀ ರವಿ ಪೂಜಾರಿ ಚಿಲಿಂಬಿ ಸೇರಿದಂತೆ ಗಣ್ಯರು ಹಾಗೂ ಇತರ ಅತಿಥಿಗಳು ಸೇರಿ ಪ್ರಶಸ್ತಿಯ ಆಹ್ವಾನ ಪತ್ರಿಕೆಯನ್ನು ಅನಾವರಣಗೊಳಿಸಿದರು.

ಈ ವರ್ಷದ ಮೂಲತ್ವ ವಿಶ್ವ ಪ್ರಶಸ್ತಿ–2026ಕ್ಕೆ ಸಮಾಜಸೇವೆ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಗಮನಾರ್ಹ ಕೊಡುಗೆ ನೀಡಿರುವ ಶ್ರೀ ನಾರಾಯಣ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ. ಸಮಾಜಮುಖಿ ಚಿಂತನೆ, ಸೇವಾ ಮನೋಭಾವ ಹಾಗೂ ಜನಪರ ಕಾರ್ಯಗಳ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಅವರ ಸೇವೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸಮಾಜದ ವಿವಿಧ ಕ್ಷೇತ್ರಗಳಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ, ಅವರ ಸೇವೆ ಮತ್ತು ಸಾಧನೆಗೆ ಗೌರವ ಸಲ್ಲಿಸುವುದು ಮೂಲತ್ವ ವಿಶ್ವ ಪ್ರಶಸ್ತಿಯ ಪ್ರಮುಖ ಉದ್ದೇಶವಾಗಿದೆ. ಪ್ರಶಸ್ತಿಯ ಮೂಲಕ ಸಮಾಜಕ್ಕೆ ಮಾದರಿಯಾಗಿರುವ ವ್ಯಕ್ತಿಗಳ ಸೇವೆಯನ್ನು ಗುರುತಿಸಿ, ಅವರ ಸಮಾಜಮುಖಿ ಕಾರ್ಯಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ.

ಆಹ್ವಾನ ಪತ್ರಿಕೆ ಬಿಡುಗಡೆ ಸಂದರ್ಭದಲ್ಲಿ ಗಣ್ಯರು ಶ್ರೀ ನಾರಾಯಣ ನಾಯಕ್ ಅವರ ಸಮಾಜಮುಖಿ ಸೇವೆಯನ್ನು ಅಭಿನಂದಿಸಿ, ಮೂಲತ್ವ ವಿಶ್ವ ಪ್ರಶಸ್ತಿ–2026ರ ಸಮಾರಂಭ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸ್ವಾಗತವನ್ನು ಟ್ರಸ್ಟಿನ ಅಧ್ಯಕ್ಷ ಪ್ರಕಾಶ್ ಮೂಲತ್ವ ಮಾಡಿದರು ಟ್ರಸ್ಟ್ ನ ಎಲ್ಲಾ ಮಾಹಿತಿಯನ್ನು ಶ್ರೀಮತಿ ಅಕ್ಷತಾ ಕದ್ರಿ ಮಾಡಿದರು. ವಂದನಾರ್ಪಣೆಯನ್ನು ಟ್ರಸ್ಟಿಯಾದ ಶ್ರೀಮತಿ ಶೈನಿ ಮೂಲತ್ವ ಮಾಡಿದರು.



Related posts

ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಗೆ ಬೆಂಕಿ – 20 ಪ್ರಯಾಣಿಕರು ಸಜೀವ ದಹನ

Mumbai News Desk

ಪ್ರಗತಿಯ ಪಥದಲ್ಲಿ ಭಾರತ್ ಬ್ಯಾಂಕ್:  ಸೂರ್ಯಕಾಂತ್ ಜಯ ಸುವರ್ಣ 

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (23/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಆಯ್ಕೆ: ಕನ್ನಡ ಚಿತ್ರರಂಗದ ಕಿರೀಟಕ್ಕೆ ಮತ್ತೊಂದು ಗರಿ

Mumbai News Desk

ಫೆಂಗಲ್ ಚಂಡಮಾರುತದ ಎಫೆಕ್ಟ್ – ದಕ್ಷಿಣ ಕನ್ನಡ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ, ನಾಳೆ (ಡಿ. 3)ಶಾಲಾ-ಕಾಲೇಜ್ ಗೆ ರಜೆ ಘೋಷಣೆ

Mumbai News Desk

ಯಕ್ಷಗಾನ ಕಲಾವಿದ, ಹಾಸ್ಯ ಚಕ್ರವರ್ತಿ, ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್

Mumbai News Desk