31 C
Mumbai
October 8, 2026
Mumbai News Kannada
ಮುಂಬಯಿ

ಶ್ರೀ ಮಹಾವಿಷ್ಣು ಮಂದಿರ, ಡೊಂಬಿವಲಿ ಸುವರ್ಣ ಮಹೋತ್ಸವ ಸಮಿತಿ ಹಾಗೂ ಕಾರ್ಯಕಾರಿ ಸಮಿತಿಯ ಜಂಟಿ ಸಭೆ




ಶ್ರೀ ಮಹಾವಿಷ್ಣು ಮಂದಿರ, ಡೊಂಬಿವಲಿಯ ಸುವರ್ಣ ಮಹೋತ್ಸವದ ಅಂಗವಾಗಿ ಸುವರ್ಣ ಮಹೋತ್ಸವ ಸಮಿತಿ ಹಾಗೂ ಕಾರ್ಯಕಾರಿ ಸಮಿತಿಯ ಜಂಟಿ ಸಭೆಯು ದಿನಾಂಕ 20.08.2026 ರಂದು ರಾತ್ರಿ 8.00 ಗಂಟೆಗೆ ಡೊಂಬಿವಲಿ (ಪಶ್ಚಿಮ)ಯ ಪ್ರೀತಿ ಸಭಾಗೃಹದಲ್ಲಿ ಯಶಸ್ವಿಯಾಗಿ ನಡೆಯಿತು.
ಸಭೆಯಲ್ಲಿ ಮಂದಿರದ ಅಧ್ಯಕ್ಷರಾದ ಶ್ರೀ ಇಂದುಶೇಖರ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಗೌರವ ಅಧ್ಯಕ್ಷರಾದ ನಿತಿನ್ ಪ್ರಕಾಶ್ ಪುತ್ರನ್ , ಕೋಶಾಧಿಕಾರಿ ಪ್ರವೀಣ್ ಶೆಟ್ಟಿ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ. ದಿವಾಕರ್ ಶೆಟ್ಟಿ (ಇಂದ್ರಾಳಿ), ಸ್ಮರಣ ಸಂಚಿಕೆ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಸುಬ್ಬಯ್ಯ ಶೆಟ್ಟಿ (ಸೂರಿಂಜೆ), ಕಾರ್ಯಕ್ರಮ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಸುಕುಮಾರ್ ಶೆಟ್ಟಿ, ಹಾಗೂ ಉಪ ಕಾರ್ಯಾಧ್ಯಕ್ಷರಾದ ರಾಜೀವ್ ಭಂಡಾರಿ, ರವಿ ಸನಿಲ್, ದೇವದಾಸ್ ಕುಲಾಲ್, ಹರೀಶ್ ಶೆಟ್ಟಿ, ರವಿ ಪೂಜಾರಿ, ವಸಂತ್ ಸುವರ್ಣ, ತಾರಾನಾಥ್ ಅಮೀನ್, ಮೋಹನ್ ಸಾಲಿಯಾನ್ ಮತ್ತು ಮನೋಹರ್ ಮೆಂಡನ್ ಉಪಸ್ಥಿತರಿದ್ದರು.
ಅಧ್ಯಕ್ಷರಾದ ಶ್ರೀ ಇಂದುಶೇಖರ್ ಸುವರ್ಣ ಅವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಮಂದಿರದ ಕಾರ್ಯದರ್ಶಿಯಾದ ಸಚಿನ್ ಪೂಜಾರಿ ಅವರು ಸುವರ್ಣ ಸಂಭ್ರಮದ ಅಂಗವಾಗಿ ಆಯೋಜಿಸಿರುವ ಸರಣಿ ಕಾರ್ಯಕ್ರಮಗಳ ಸಂಪೂರ್ಣ ವಿವರವನ್ನು ಸಭೆಗೆ ಮಂಡಿಸಿದರು.
ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ. ದಿವಾಕರ್ ಶೆಟ್ಟಿ ಅವರು ಮಾತನಾಡಿ, ಶ್ರೀ ಮಹಾವಿಷ್ಣು ಮಂದಿರದ ಸುವರ್ಣ ಮಹೋತ್ಸವವನ್ನು ಎಲ್ಲರೂ ಒಗ್ಗಟ್ಟಿನಿಂದ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು ಹಾಗೂ ಸಮಿತಿಯ ಪ್ರತಿಯೊಬ್ಬ ಸದಸ್ಯರೂ ಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.
ಸ್ಮರಣ ಸಂಚಿಕೆ ಸಮಿತಿಯ ಕಾರ್ಯಾಧ್ಯಕ್ಷರಾದ ಸುಬ್ಬಯ್ಯ ಶೆಟ್ಟಿ ಅವರು ತಮ್ಮ ಮೇಲೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಭರವಸೆ ವ್ಯಕ್ತಪಡಿಸಿ, ಎಲ್ಲರ ಸಹಕಾರದೊಂದಿಗೆ ಸ್ಮರಣ ಸಂಚಿಕೆಯನ್ನು ಯಶಸ್ವಿಯಾಗಿ ಹೊರತರಲು ಸಂಕಲ್ಪ ವ್ಯಕ್ತಪಡಿಸಿದರು.
ಕಾರ್ಯಕ್ರಮ ಸಮಿತಿಯ ಕಾರ್ಯಾಧ್ಯಕ್ಷರಾದ ಸುಕುಮಾರ್ ಶೆಟ್ಟಿ ಅವರು, ಮಹಾವಿಷ್ಣು ದೇವರ ಅನುಗ್ರಹದಿಂದ ಎಲ್ಲಾ ಕಾರ್ಯಕ್ರಮಗಳು ಅತ್ಯುತ್ತಮವಾಗಿ ನೆರವೇರುವ ವಿಶ್ವಾಸ ವ್ಯಕ್ತಪಡಿಸಿದರು. ಸುಮಾರು ₹60 ಲಕ್ಷದ ಸುವರ್ಣ ಮಹೋತ್ಸವ ಯೋಜನೆಯನ್ನು ಯಶಸ್ವಿಯಾಗಿ ನಡೆಸಲು ಪ್ರತ್ಯೇಕ ನಿಧಿ ಸಂಗ್ರಹಣಾ ಸಮಿತಿಯನ್ನು ರಚಿಸಿ ಮುಂದಿನ ಕಾರ್ಯಚಟುವಟಿಕೆಗಳನ್ನು ಆರಂಭಿಸುವಂತೆ ಸಲಹೆ ನೀಡಿದರು.
ಉಪ ಕಾರ್ಯಾಧ್ಯಕ್ಷರಾದ ರವಿ ಸನಿಲ್ ಅವರು ಯುವಕರ ತಂಡದ ಉತ್ಸಾಹ ಮತ್ತು ಕಾರ್ಯನಿಷ್ಠೆಯನ್ನು ಶ್ಲಾಘಿಸಿ, ಅವರಿಂದ ಕಾರ್ಯಕ್ರಮಗಳು ಅತ್ಯುತ್ತಮ ರೀತಿಯಲ್ಲಿ ನಡೆಯಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ದೇವದಾಸ್ ಕುಲಾಲ್ ಅವರು ಸುವರ್ಣ ಸಂಭ್ರಮದ ಪ್ರತಿಯೊಂದು ಕಾರ್ಯಕ್ರಮವೂ ಅರ್ಥಪೂರ್ಣ ಹಾಗೂ ಶಿಸ್ತಿನ ರೂಪದಲ್ಲಿ ನೆರವೇರಲು ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.
ವಸಂತ್ ಸುವರ್ಣ ಅವರು ವಾರ್ಷಿಕ ಮಹಾಸಭೆಯಲ್ಲಿ ನಿರ್ಧರಿಸಿದ 25 ಕಾರ್ಯಕ್ರಮಗಳಲ್ಲಿ ಈಗಾಗಲೇ ಮೂರು ಕಾರ್ಯಕ್ರಮಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ತಿಳಿಸಿ, ಉಳಿದ ಕಾರ್ಯಕ್ರಮಗಳಿಗೂ ಎಲ್ಲ ಸದಸ್ಯರು ಸಹಕರಿಸುವಂತೆ ಕೋರಿದರು.
ಮೋಹನ್ ಸಾಲಿಯಾನ್ ಅವರು ಮುಂದಿನ ಎಲ್ಲಾ ಸುವರ್ಣ ಮಹೋತ್ಸವ ಕಾರ್ಯಕ್ರಮಗಳಿಗೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಸಭೆಯಲ್ಲಿ ಸದಸ್ಯರಾದ ರತ್ನಾಕರ್ ಬಂಗೇರ ಹಾಗೂ ಲೀಲೆಶ್ ಸುವರ್ಣ ಅವರು ತಮ್ಮ ಅಮೂಲ್ಯ ಸಲಹೆ–ಸೂಚನೆಗಳನ್ನು ನೀಡಿದರು.
ಕೊನೆಯಲ್ಲಿ ಅಧ್ಯಕ್ಷರಾದ ಇಂದುಶೇಖರ್ ಸುವರ್ಣ ಅವರು ಸಭೆಯಲ್ಲಿ ಭಾಗವಹಿಸಿ ತಮ್ಮ ಅನಿಸಿಕೆ, ಸಲಹೆ ಹಾಗೂ ಸೂಚನೆಗಳನ್ನು ನೀಡಿದ ಎಲ್ಲ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ, ಮುಂಬರುವ ಕಾರ್ಯಕ್ರಮಗಳ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು.
ಸಭೆಯ ಅಂತ್ಯದಲ್ಲಿ ಮಂದಿರದ ಗೌರವ ಪ್ರಧಾನ ಕಾರ್ಯದರ್ಶಿಯಾದ ಸಚಿನ್ ಪೂಜಾರಿ ಅವರು ಉಪಸ್ಥಿತರಿದ್ದ ಎಲ್ಲರಿಗೂ ವಂದನಾರ್ಪಣೆ ಸಲ್ಲಿಸಿ ಸಭೆಯನ್ನು ಮುಕ್ತಾಯಗೊಳಿಸಿದರು.



Related posts

ಮಲಾಡ್ ಪೂರ್ವದ ಶ್ರೀ ದೇವಿ  ಮಹಮ್ಮಾಯಿ ದೇವಸ್ಥಾನ ದೇವಸ್ಥಾನದ  ವಾರ್ಷಿಕ ಮಹೋತ್ಸವ ಮತ್ತು ಪಾಲ್ಕಿ ಉತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ

Mumbai News Desk

ಮಲಾಡ್ ಕನ್ನಡ ಸಂಘ ಮಹಿಳಾ ವಿಭಾಗದ ಅರಸಿನ ಕುಂಕುಮ,

Mumbai News Desk

ಸಾಫಲ್ಯ ಸೇವಾ ಸಂಘದ ಸ್ತ್ರೀ ಶಕ್ತಿ ಕಾರ್ಯಕ್ರಮ

Mumbai News Desk

‘ಧೀಮಂತ ಧರ್ಮಪಾಲ’ ಗೌರವ ಗ್ರಂಥ ಲೋಕಾರ್ಪಣೆ ಯಶಸ್ವಿ: ಸ್ನೇಹಕೂಟ

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ – ಆಷಾಢ ಹಬ್ಬ ಆಚರಣೆ,

Mumbai News Desk

ಮುಂಬೈ ಪೈಧೋನಿ ಕುಟುಂಬದ ಸಾವು: ಕಲ್ಲಂಗಡಿಯಲ್ಲಿ ಇಲಿ ವಿಷ ಪತ್ತೆಯಾಗಿರುವುದು ಜೆಜೆ ಆಸ್ಪತ್ರೆಯ ವರದಿಯಿಂದ ದೃಢ

Mumbai News Desk