30 C
Mumbai
September 11, 2026
Mumbai News Kannada
ತುಳುನಾಡು

ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ 99ನೇ ತಿಂಗಳ ಸ್ವಚ್ಛತಾ ಕಾರ್ಯಕ್ರಮ





ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಉಡುಪಿ ವತಿಯಿಂದ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ 99ನೇ ತಿಂಗಳ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸರ್ವಧರ್ಮ ಪ್ರಾರ್ಥನೆ ಸೆಪ್ಟೆಂಬರ್ 9ರಂದು ಬೆಳಿಗ್ಗೆ 7 ಗಂಟೆಗೆ ನಡೆಯಿತು.

ಜಿಲ್ಲಾ ಮುಖ್ಯ ಆಯುಕ್ತರಾದ ಇಂದ್ರಾಳಿ ಜಯಕರ್ ಶೆಟ್ಟಿ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ 21 ಕಾಲೇಜುಗಳಿಂದ 200ಕ್ಕೂ ಅಧಿಕ ರೋವರ್‌ಗಳು ಮತ್ತು ರೇಂಜರ್‌ಗಳು ಭಾಗವಹಿಸಿದರು. ಶಿಸ್ತು, ಸೇವಾ ಮನೋಭಾವ ಹಾಗೂ ಉತ್ತಮ ಮೌಲ್ಯಗಳನ್ನು ಮೈಗೂಡಿಸಿಕೊಂಡ ವಿದ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್‌ನ ಪ್ರತಿಜ್ಞೆ ಹಾಗೂ ನಿಯಮಗಳನ್ನು ಪಾಲಿಸಿಕೊಂಡು ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ರೈಲ್ವೆ ಅಧಿಕಾರಿ ಉದಯ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಆನಂದ್ ಬಿ. ಅಡಿಗ, ಶಿಬಿರ ನಾಯಕ ರಾಜೇಶ್ ಅವಲಕ್ಕಿ, ಎಲ್‌ಟಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್, ಆರ್‌ಎಸ್‌ಎಲ್ ಅರವಿಂದ್, ಆರ್‌ಎಲ್ ಸ್ಮಿತಾ ಫೆರ್ನಾಂಡಿಸ್, ಆರ್‌ಎಲ್ ವಂದನಾ, ರೈಲ್ವೆ ಸಿಬ್ಬಂದಿ ಹಾಗೂ ರೈಲ್ವೆ ಆರಕ್ಷಕ ಠಾಣೆಯ ಎಎಸ್‌ಐ ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.

ಸ್ವಚ್ಛತಾ ಕಾರ್ಯದ ಬಳಿಕ ಸರ್ವಧರ್ಮ ಪ್ರಾರ್ಥನೆ ನೆರವೇರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ, ಶಿಸ್ತು, ಸೇವಾ ಮನೋಭಾವ ಹಾಗೂ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಮಹತ್ವದ್ದಾಯಿತು.

ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್ ಅವರು ಕಾರ್ಯಕ್ರಮದ ಸಂಘಟನಾ ಜವಾಬ್ದಾರಿಯನ್ನು ವಹಿಸಿಕೊಂಡು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

– ಜಯ ಸಿ. ಪೂಜಾರಿ
ಕೆಳಾರ್ಕಳ ಬೆಟ್ಟು



Related posts

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಬಲಿ ಉತ್ಸವ ಸಂಪನ್ನ

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮ ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

ಉಡುಪಿ: ವಿಶ್ವ ಗೀತಾ ಪರ್ಯಾಯದ ವೈಭವ; ಶ್ರೀಕೃಷ್ಣ ಮಠದಲ್ಲಿ 2 ಕೋಟಿ ರೂ. ವೆಚ್ಚದ ‘ಸ್ವರ್ಣ ಭಗವದ್ಗೀತೆ’ ಲೋಕಾರ್ಪಣೆ

Mumbai News Desk

ಮುಲ್ಕಿ : ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದಲ್ಲಿ ‘ವನ ಮಹೋತ್ಸವ’ ದಿನಾಚರಣೆ, ಹಸಿರು ಕ್ರಾಂತಿಗೆ ಕರೆ

Mumbai News Desk

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ – ಇಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ತುರ್ತು ಸಭೆ

Mumbai News Desk

ಹೆಜಮಾಡಿ : ವಿದ್ಯಾ ಪ್ರಸಾರ ವಿದ್ಯಾ ಮಂದಿರದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಮತ್ತು ವನಮಹೋತ್ಸವ ಆಚರಣೆ

Mumbai News Desk