31 C
Mumbai
September 21, 2026
Mumbai News Kannada
ಸುದ್ದಿ

ಸೌಜನ್ಯ ಅತ್ಯಾಚಾರ–ಕೊಲೆ ಪ್ರಕರಣ: ದಶಕದ ಬಳಿಕ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೂಚನೆ



ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಗಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.21) ಆದೇಶಿಸಿದೆ. ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೂರು ತಿಂಗಳೊಳಗೆ ಅನುಪಾಲನಾ ವರದಿಯನ್ನು ಸಲ್ಲಿಸಬೇಕು ಎಂದು ನ್ಯಾಯಾಲಯವು ನಿರ್ದೇಶನ ನೀಡಿದೆ .

ಅಕ್ಟೋಬರ್ 2012ರಲ್ಲಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ನಡೆದಿತ್ತು. ಈಗ ದಶಕದ ಬಳಿಕ ಸುಪ್ರೀಂ ಕೋರ್ಟ್‌ನಿಂದ ಈ ಆದೇಶ ಬಂದಿದೆ. ಕರ್ನಾಟಕದ ಅಪರಾಧ ತನಿಖಾ ಇಲಾಖೆ (ಸಿಐಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸಿದ್ದಾಗ್ಯೂ, ಸೌಜನ್ಯಗಳ ಸಾವಿಗೆ ಕಾರಣರಾದವರನ್ನು ಇದುವರೆಗೆ ಗುರುತಿಸಲು ಸಾಧ್ಯವಾಗಿಲ್ಲ.

ಹೊಸದಾಗಿ ತನಿಖೆ ನಡೆಸಬೇಕೆಂದು ಕೋರಿ ಸೌಜನ್ಯಳ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈಗ ಮರುತನಿಖೆ ಅದೇಶ ನೀಡಿದೆ. ಹಿಂದಿನ ಸಿಐಡಿ ಮತ್ತು ಸಿಬಿಐ ತನಿಖೆಗಳಲ್ಲಿ ಪ್ರಮುಖ ಸಾಕ್ಷ್ಯಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಕುಸುಮಾವತಿ ಆರೋಪಿಸಿದ್ದರು ಹಾಗೂ ಆ ತನಿಖೆಗಳಲ್ಲಿದ್ದ ಲೋಪದೋಷಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.



Related posts

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ ವಿಟಿಎಂಎಸ್ ಟ್ರೋಪಿ 2024ಕ್ಕೆ ಚಾಲನೆ

Mumbai News Desk

ಬಜೆಟ್ ನಲ್ಲಿ ನಿರ್ಲಕ್ಷ್ಯ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಗ್ರಹ* ಬಂಟರ ಅಭಿವೃದ್ದಿ ನಿಗಮ ಸ್ಥಾಪಿಸಿ : ಐಕಳ ಹರೀಶ್ ಶೆಟ್ಟಿ

Mumbai News Desk

ಯುವ ಭರತನಾಟ್ಯ ಪ್ರತಿಭೆ ವಿದುಷಿ ಸಿಂಚನ ಎಸ್ ಕುಲಾಲ್ : ಲಿಯೋ ಕ್ಲಬ್ ಮಂಗಳಾದೇವಿ ವತಿಯಿಂದ ಸನ್ಮಾನ

Mumbai News Desk

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಎನ್ಐಎ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ಶಾರೀಕ್

Mumbai News Desk

ಬೊಯಿಸರ್ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಸಾರ್ವಜನಿಕ ಆಶ್ಲೇಷಾ ಪೂಜೆ , ದುರ್ಗಾ ಪೂಜೆ , ಶನಿಪೂಜೆ ಸಂಪನ್ನ

Mumbai News Desk

ಕಲಾಜಗತ್ತಿನಲ್ಲಿ ಕಮರಿದ ಸಾಧನೆಯ ನೃತ್ಯಕ್ರಾಂತಿ: ಉಡುಪಿಯ ವಿದುಷಿ ದೀಕ್ಷಾ ವಿಶ್ವದಾಖಲೆ!

Mumbai News Desk