
ಮುಂಬೈ: ರಾಧಾಕೃಷ್ಣ ಭಜನಾ ಮಂಡಳಿಯ ಸಂಸ್ಥಾಪಕ ಸದಸ್ಯ ಹಾಗೂ ಪ್ರಧಾನ ಭುವಾಜಿ ಶ್ರೀ ಶೇಖರ್ ಕೋಟ್ಯಾನ್ (88) ಅವರು ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು.
ಅವರು ಪತ್ನಿ, ಓರ್ವ ಪುತ್ರ, ಸೊಸೆ, ಮೊಮ್ಮಗ, ಓರ್ವ ಪುತ್ರಿ, ಅಳಿಯ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಭಜನಾ ಮಂಡಳಿಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರ ನಿಧನಕ್ಕೆ ರಾಧಾಕೃಷ್ಣ ಭಜನಾ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.
ಮೃತರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ 2:00 ಗಂಟೆಗೆ ಮುಂಬೈನ ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ನಲ್ಲಿರುವ ಠಾಕೂರ್ ವಿದ್ಯಾಮಂದಿರ್ ಗೇಟ್ ನಂ. 2 ರ ಎದುರು, ವಿಡಿಯೋಕಾನ್ ಟವರ್ ಪಕ್ಕದ ‘ವೀಣಾ ಸಾಜ್’ ಕಟ್ಟಡದ ಫ್ಲಾಟ್ ನಂ. 607ರ ನಿವಾಸದಿಂದ ನೆರವೇರಲಿದೆ ಎಂದು ಕುಟುಂಬ ಮೂಲಗಳು ಹಾಗೂ ಮಂಡಳಿಯ ಪ್ರಕಟಣೆ ತಿಳಿಸಿದೆ.



