ಹೆಜಮಾಡಿ ಸಾನದ ಮನೆ ನಿವಾಸಿ, ಹೆಜಮಾಡಿ ಕುದುರೆ ಜಾರಂದಾಯ ದೈವಸ್ಥಾನದ ಗೌರವಾಧ್ಯಕ್ಷ ನಾರಾಯಣ ಪಿ. ಅಮೀನ್ (79) ಅವರು ಸೆಪ್ಟೆಂಬರ್ 30ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಹೆಜಮಾಡಿ ಕುದುರೆ ಜಾರಂದಾಯ ದೈವಸ್ಥಾನದ ಗಡಿ ಪ್ರಧಾನ ಅರ್ಚಕರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ಪ್ರಸ್ತುತ ಗೌರವಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ದೈವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಅವರು ಹಲವು ವರ್ಷಗಳಿಂದ ಶ್ರಮಿಸಿದ್ದರು.
ಮಂಗಳೂರಿನ ಎಂ.ಸಿ.ಎಫ್.ನಲ್ಲಿ ಉದ್ಯೋಗಿಯಾಗಿದ್ದ ನಾರಾಯಣ ಪಿ. ಅಮೀನ್ ಅವರು ಕರ್ನಾಟಕ ರಾಜ್ಯದ ಟೈಪ್ರೈಟಿಂಗ್ನ ಪ್ರಧಾನ ಪರಿವೀಕ್ಷಕರಾಗಿಯೂ ಸೇವೆ ಸಲ್ಲಿಸಿದ್ದರು. ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ದೈವಸ್ಥಾನದ ಅಭಿವೃದ್ಧಿ ಕಾರ್ಯಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ನಾರಾಯಣ ಪಿ. ಅಮೀನ್ ಅವರ ನಿಧನಕ್ಕೆ ಕುಟುಂಬಸ್ಥರು, ಬಂಧು-ಬಳಗ, ಹಿತೈಷಿಗಳು ಹಾಗೂ ದೈವಸ್ಥಾನದ ಭಕ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.



