ಮಂಗಳೂರು: ಮುಂಬೈನ ಪ್ರಸಿದ್ಧ ಚಿನ್ನದ ವ್ಯಾಪಾರಿ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಉಪಾಧ್ಯಕ್ಷರಾದ ಕುಮಾರೇಶ್ ಆಚಾರ್ಯ ಅವರ ಮಾತೃಶ್ರೀ ವಾರಿಜಾ ಶಿವಣ್ಣ ಆಚಾರ್ಯ, ಗಂಜಿಮಠ (96) ಅವರು ಅ. 1, ಬುಧವಾರ ಮುಂಜಾನೆ ಗಂಜಿಮಠದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಮೃತರು ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಸೊಸೆ, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಆಚಾರ್ಯ ಸಹಿತ ಮೂವರು ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ವಾರಿಜಾ ಶಿವಣ್ಣ ಆಚಾರ್ಯ ಅವರ ನಿಧನಕ್ಕೆ ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ ಶೆಟ್ಟಿ ಪಣಿಯೂರ್, ಪದಾಧಿಕಾರಿಗಳು, ಮಹಿಳಾ ವಿಭಾಗ ಹಾಗೂ ಯುವ ವಿಭಾಗದವರು ತೀವ್ರ ಸಂತಾಪ ಸೂಚಿಸಿದ್ದಾರೆ.



