
ಮೀರಾರೋಡ್ ಪೂರ್ವ ಭಾರತಿ ಪಾರ್ಕ್ ಬಳಿಯ ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿಯಲ್ಲಿ, ಶ್ರೀ ಅಯ್ಯಪ್ಪ ಸ್ವಾಮಿಯ ಆರಾಧನೆಗೈಯುತ್ತಿರುವ ಶ್ರೀ ಅಯ್ಯಪ್ಪ ಭಕ್ತ ಮಂಡಳಿಯ 27ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆಯು ಡಿ.24 ರವಿವಾರ ಎರ್ಮಾಳು ಬಡಾ ಜಯಶೀಲಾ ಗುರುಸ್ವಾಮಿ ಅವರ ಮುಂದಾಳತ್ವದಲ್ಲಿ ಶ್ರೀ ಲಕ್ಷ್ಮೀನಾರಾಯಣ ಭಜನ ಮಂದಿರದಲ್ಲಿ ಜರಗಲಿದೆ.
ಮಹಾಪೂಜೆಯಂದು ಬೆಳ್ಳಿಗ್ಗೆ 6 ಗಂಟೆಗೆ ಸಾಣೂರು ಸಾತಿಂಜ ಜನಾರ್ದನ ಭಟ್ ಅವರ ಪೌರೋಹಿತ್ಯದಲ್ಲಿ ಗಣಹೋಮ ನಡೆಯಲಿದೆ.
ಬೆಳ್ಳಿಗ್ಗೆ 9.30 ಗಂಟೆಗೆ ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿಯ ಸದಸ್ಯರು ಭಜನಾ ಕಾರ್ಯಕ್ರಮ ಸಾದರ ಪಡಿಸುವರು.
11.30 ಗಂಟೆಗೆ ಅರ್ಚನೆ, 12 ಕ್ಕೆ ಪಡಿಪೂಜೆ, 12.30ಕ್ಕೆ ಮಹಾ ಮಂಗಳಾರತಿ ನಡೆಯಲಿದೆ.
ಮದ್ಯಾಹ್ನ 1 ಗಂಟೆಗೆ ತೀರ್ಥ ಪ್ರಸಾದ ವಿತರಣೆ, ಆ ಬಳಿಕ ಅನ್ನಸಂತರ್ಪಣೆಯ ವ್ಯವಸ್ಥೆಯಿದೆ.
ಸಂಜೆ 6 ಗಂಟೆಯ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಆರಂಭವಾಗಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದ ನಡುವೆ ನಡೆಯುವ ಕಿರು ಸಭಾ ಕಾರ್ಯಕ್ರಮದಲ್ಲಿ ಇಸ್ರೋ ಬೆಂಗಳೂರು ಕೇಂದ್ರದಲ್ಲಿ ಸ್ಪೇಸ್ ಕ್ರಾಫ್ಟ್ ಆಪರೇಷನ್ ಮ್ಯಾನೇಜರ್ ಆಗಿ ಸೇವೆಗೈಯುತಿರುವ, ಭಾರತದ ಮಹಾತ್ವಾಕಾಂಕ್ಷೆಯ ಚಂದ್ರಯಾಣ – 3 ರಲ್ಲಿ ಕಂಪ್ಯೂಟರ್ ವಿಭಾಗದ ಪ್ರಾಜೆಕ್ಟ್ ಮೆನೇಜರ್ ಆಗಿ ಕರ್ತವ್ಯ ನಿರ್ವಹಿಸಿದ ಮೊಗವೀರ ಸಮಾಜದ ಯುವ ವಿಜ್ಞಾನಿ ನಿಧಿ ಕೋಟ್ಯಾನ್ ಅವರನ್ನು ಸನ್ಮಾನಿಸಲಾಗುವುದು.
ಈ ಎಲ್ಲಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ , ಶ್ರೀ ಅಯ್ಯಪ್ಪ ಸ್ವಾಮಿಯ ಪ್ರಸಾದ ಸ್ವೀಕರಿಸುವಂತ್ತೆ, ಎರ್ಮಾಳು ಬಡಾ ಜಯಶೀಲಾ ಗುರುಸ್ವಾಮಿ, ಸಮಿತಿಯ ಅಧ್ಯಕ್ಷ ಜಯಂತ್ ಶೆಟ್ಟಿ, ಉಪಾಧ್ಯಕ್ಷ ಮಾಧವ ಸಿ.ಕೋಟ್ಯಾನ್, ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಜತೆ ಕಾರ್ಯದರ್ಶಿ ಭಾಸ್ಕರ್ ಶೆಟ್ಟಿ, ಕೋಶಾಧಿಕಾರಿ ಸುಧೀರ್ ಎ ಪುತ್ರನ್, ಜತೆ ಕೋಶಾಧಿಕಾರಿ ದೀಕ್ಷಿತ್ ಕೋಟ್ಯಾನ್, ಹಾಗೂ ಸದಸ್ಯರು, ಪೂಜಾ ಸಮಿತಿಯ ಸದಸ್ಯರು, ಮಂಗಳೂರು ಶಾಖೆಯ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.