ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಸಂಬಂಧ ಸಾರ್ವಜನಿಕರಿಂದ ಅಭಿಪ್ರಾಯ ಹಾಗೂ ಸಲಹೆಗಳನ್ನು ಸ್ವೀಕರಿಸಲಾಗುವುದು ಎಂದು ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಿಳಿಸಿದ್ದರು. ಇದೀಗ ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಸರ್ಕಾರದಿಂದ ಅಧಿಕೃತ ಸೂಚನೆ ಹೊರಬಿದ್ದಿದ್ದು, ಸಾರ್ವಜನಿಕರಿಗೆ ಯಾವುದೇ ಸಲಹೆ ಅಥವಾ ಅಭಿಪ್ರಾಯಗಳಿದ್ದಲ್ಲಿ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮುಖಾಂತರ ಸರ್ಕಾರಕ್ಕೆ ತಲುಪಿಸಲು ಅಕ್ಟೋಬರ್ 30ರವರೆಗೆ ಅವಕಾಶ ಕಲ್ಪಿಸಲಾಗಿದೆ. ನಾಗರಿಕರು ತಮ್ಮ ಅನಿಸಿಕೆಗಳನ್ನು ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು-560001 (ಇ-ಮೇಲ್: cm.kar@nic.in), ಸರ್ಕಾರದ ಅಪರ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ. ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 (ಇ-ಮೇಲ್: prs.revenue@gmail.com) ಅಥವಾ ಜಿಲ್ಲಾಧಿಕಾರಿಗಳ ಕಚೇರಿ, ಪ್ರಜಾಸೌಧ, ದಕ್ಷಿಣ ಕನ್ನಡ ಜಿಲ್ಲಾಡಳಿತ ಕೇಂದ್ರ, ಪಡೀಲು, ಮಂಗಳೂರು-575007 (ಇ-ಮೇಲ್: dc.mnglr@gmail.com) ಈ ವಿಳಾಸಗಳಿಗೆ ಸಲ್ಲಿಸಬಹುದಾಗಿದೆ.



