
ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿ, ಅಭಿವೃದ್ಧಿ ಸಮಿತಿ ಮತ್ತು ಭಕ್ತರ ಸಮ್ಮುಖದಲ್ಲಿ 198 ದೀಪವನ್ನು ಬೆಳಗಿಸಿ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಶ್ರೀದೇವಿಗೆ ಪೂಜೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
.
.
.
.
.




















































































