September 6, 2026
Mumbai News Kannada
ಸುದ್ದಿ

ಬಂಟ್ವಾಳ: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ಇನ್ನಿಲ್ಲ,





     ಬಂಟ್ವಾಳ  ಜ24:  ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ ಪೆರುವಾಯಿ ನಾರಾಯಣ ಶೆಟ್ಟರು, ಕಂಚಿನ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಗೆ ಹೆಸರಾಗಿದ್ದರು.ಬಂಟ್ವಾಳ ತಾಲೂಕು ಪೆರುವಾಯಿ ಇವರ ಹುಟ್ಟೂರು. ಮದನಪ್ಪ ಶೆಟ್ಟಿ ಮತ್ತು ಅಬ್ಬಕ್ಕ ದಂಪತಿಗಳ ಸುಪುತ್ರರಾಗಿದ್ದ ಇವರು, 12ನೇ ವಯಸ್ಸಿನಲ್ಲೇ ಯಕ್ಷಗಾನದಲ್ಲಿ ತೊಡಗಿಸಿಕೊಂಡಿದ್ದರು. ಮಡಾವು, ಧರ್ಮಸ್ಥಳ, ಕರ್ನಾಟಕ, ಪೊಳಲಿ ರಾಜರಾಜೇಶ್ವರಿ ಮೇಳ, ಕದ್ರಿ, ಕುಂಬಳೆ, ಕುಂಟಾರು, ಕಟೀಲು ಹೀಗೆ ವಿವಿಧ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ಮಾಡಿದ ಪೆರುವಾಯಿ ನಾರಾಯಣ ಶೆಟ್ಟಿ ಅವರದು ಬಹುದೊಡ್ಡ ಸಾಧನೆ. ಅವರು ಸುಮಾರು 52 ವರ್ಷ ಗಳ ಕಾಲ ನಿರಂತರ ತಿರುಗಾಟ ನಡೆಸಿದ್ದರು. ಬಳಿಕ ಅನಾರೋಗ್ಯದಿಂದಾಗಿ ಯಕ್ಷರಂಗದಿಂದ ನಿವೃತ್ತಪಡೆದಿದ್ದರು.

ಕಟೀಲುಮೇಳದ ಕಲಾವಿದರಾಗಿದ್ದ ಅವರು ನಿರ್ವಹಿಸುತ್ತಿದ್ದಾಗ ರಕ್ತಬೀಜ, ಹಿರಣ್ಯಕಷ್ಯಪು, ಕಂಸ, ಸುಂದರರಾವಣ, ಋತುಪರ್ಣ, ಹನೂಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಹಲವು ಪಾತ್ರಗಳನ್ನು ಬಹಳ ಪರಿಣಾಮಕಾರಿಯಾಗಿ ರಂಗದಲ್ಲಿ ಬಿಂಬಿಸಿ ಖ್ಯಾತರಾದವರು. ಕೋಟಿ ಚೆನ್ನಯದ ಕೋಟಿ ಮೊದಲಾದ ವೇಷಗಳ ನಿರ್ವಹಣೆಯಲ್ಲಿ “ಪೆರುವಾಯಿ ಶೈಲಿ’ ಎಂಬ ಹೊಸ ಹಾದಿಯನ್ನು ನಿರ್ಮಿಸಿದ ಕೀರ್ತಿವಂತ.ತುಳು ಪ್ರಸಂಗಗಳ ಪಾತ್ರನಿರ್ವಹಣೆಯಲ್ಲೂ ವೈಶಿಷ್ಟ್ಯತೆಯನ್ನು ಮೆರೆದವರು. ಇವರ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳು ಬಹಳ ಪ್ರಸಿದ್ಧ ಪಡೆದಿತ್ತು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.



Related posts

ವಿಶ್ವನಾಥ ಶೆಟ್ಟಿ ಇನ್ನಂಜೆ ವಿಧಿವಶ

Mumbai News Desk

ಇಂದು ಭಾರತ್ ಬಂದ್ : ದೇಶಾದ್ಯಂತ ವ್ಯಾಪಕ ಪ್ರತಿಭಟನೆ! ಏನೇನಿರುತ್ತೆ, ಏನಿರಲ್ಲ?: ಇಲ್ಲಿದೆ ಸಂಪೂರ್ಣ ಮಾಹಿತಿ

Mumbai News Desk

ಮುಂಬೈ: ಅಪ್ಪಾಜಿ ಬೀಡು ರಮೇಶ್ ಗುರುಸ್ವಾಮಿ ಇನ್ನಿಲ್ಲ

Mumbai News Desk

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅಧಿಕೃತ ಚಾಲನೆ

Mumbai News Desk

ವಸಯಿ ತಾಲೂಕ ಹೋಟೆಲ್ ಎಸೋಸಿಯೇಶನಿಂದ  ಪ್ರತಿಭಟನೆ

Mumbai News Desk

ಸುಧಾಮೂರ್ತಿ ರಾಜ್ಯಸಭೆಗೆ ನೇಮಕ

Mumbai News Desk