
ಮುಂಬಯಿ ಮಹಾನಗರ ಡೊಂಬಿವಲಿಯ ಹಲವಾರು ಧಾರ್ಮಿಕ, ಸಾಮಾಜಿಕ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ವಿಶ್ವನಾಥ ಶೆಟ್ಟಿ ಇನ್ನಂಜೆ (52), ಇವರು ತಾ. 26.04.2024 ರಂದು ತವರಿನಲ್ಲಿ ಹೃದಯಾಘಾತದಿಂದ ಆಕಸ್ಮಿಕವಾಗಿ ದೈವಾದೀನರಾಗಿದ್ದಾರೆ. ಅವರು ಊರಿನಲ್ಲಿ ತನ್ನ ಮಾವನ ಉತ್ತರಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು.
ಅಪಾರ ದೈವ ಭಕ್ತರಾಗಿದ್ದ, ಇವರು ಶಿವಸೇನೆ ದಕ್ಷಿಣ ಭಾರತ ವಿಭಾಗದ ಕಾರ್ಯಾಧ್ಯಕ್ಷ ಸುಭಾಷ್ ಶೆಟ್ಟಿ ಇನ್ನಂಜೆ ಅವರ ಸಹೋದರ. ಇವರು ತಾಯಿ, ಪತ್ನಿ ಮತ್ತು ಪುತ್ರಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಅವರ ಆತ್ಮಕ್ಕೆ ಆ ಭಗವಂತ ಚಿರಶಾಂತಿ ಯನ್ನು ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ. ಅವರ ಅಗಲುವಿಕೆಗೆ ಡೊಂಬಿವಲಿಯ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳು, ಸದಸ್ಯರು ಶೋಕ ವ್ಯಕ್ತಪಡಿಸಿದ್ದಾರೆ.