23.5 C
Karnataka
April 4, 2025
ಪ್ರಕಟಣೆ

ಮಂಗಳೂರು ವಿ. ವಿ.  42ನೇ ಘಟಿಕೋತ್ಸವ : ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಗೌರವ ಡಾಕ್ಟರೇಟ್ ಪದವಿ



ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 42ನೆ ಘಟಿಕೋತ್ಸವ ಜೂ. 15ರಂದು ನಡೆಯಲಿದ್ದು, ಡಾ.ರೊನಾಲ್ಡ್ ಕೂಲಾಸೋ, ತುಂಬೆ ಗ್ರೂಪ್ ಸ್ಥಾಪಕಾಧ್ಯP ಡಾ.ತುಂಬೆ ಮೊಯ್ದೀನ್ ಹಾಗೂ ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುವುದು ಎಂದು ವಿವಿಯ ಉಪ ಕುಲಪತಿ ಡಾ.ಪಿ.ಎಲ್.ಧರ್ಮ ತಿಳಿಸಿದ್ದಾರೆ.

ಮಂಗಳೂರಿನ ವಿವಿ ಕಾಲೇಜಿನಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಈ ಬಾರಿ ಗೌರವ ಡಾಕ್ಟರೇಟ್‌ಗಾಗಿ 12 ಪ್ರಸ್ತಾವನೆಗಳು ಬಂದಿದ್ದು, ಮೂರು ಹೆಸರುಗಳನ್ನು ಆಯ್ಕೆ ಮಾಡಿ ಕುಲಾಧಿಪತಿಗಳು ನೀಡಿದ್ದಾರೆ ಎಂದು ತಿಳಿಸಿದರು.

ವಿಶ್ವವಿದ್ಯಾನಿಲಯಕ್ಕೆ ವಿವಿಧ ಸಾಮಾಜಿಕ, ಶೈಕ್ಷಣಿಕ ಹಾಗೂ ಉದ್ಯಮ ಕ್ಷೇತ್ರದಲ್ಲಿ ವಿವಿಧ ರೀತಿಯಲ್ಲಿ ಸಾಧನೆ ಮಾಡಿರುವ, ಸೇವೆ ನೀಡಿರುವ ಗಣ್ಯ ವ್ಯಕ್ತಿಗಳಿಗೆ ಗೌರವ ಡಾಕ್ಟರೇಟ್‌ಗಾಗಿ ಬರುವ ಪ್ರಸ್ತಾವನೆಗಳನ್ನು ಸಿಂಡಿಕೇಟ್ ಸಭೆಯಲ್ಲಿ ದಾಖಲೆಯೊಂದಿಗೆ ಇರಿಸಿ ಸಿಂಡಿಕೇಟ್ ಸಭೆಯ ನಿರ್ಣಯದ ಪ್ರಕಾರ ಕುಲಾಧಿಪತಿಗಳಿಗೆ ರವಾನಿಸಲಾಗುತ್ತದೆ. ಅವರು ಅಂತಿಮ ಆಯ್ಕೆ ಮಾಡಿ ಕಳುಹಿಸುತ್ತಾರೆ ಎಂದು ತಿಳಿಸಿದರು.

ಜೂ.15ರಂದು ಮಧ್ಯಾಹ್ನ 12.15ಕ್ಕೆ ಮಂಗಳೂರು ವಿವಿ ಆವರಣದಲ್ಲಿರುವ ಮಂಗಳ ಸಭಾಂಗಣದಲ್ಲಿ ಘಟಿಕೋತ್ಸವ ನಡೆಯಲಿದೆ. ಹೊಸದಿಲ್ಲಿಯ ಅಭಿವೃದ್ಧಿಶೀಲ ರಾಷ್ಟ್ರಗಳ ಸಂಶೋಧನೆ ಮತ್ತು ಮಾಹಿತಿ ವ್ಯವಸ್ಥೆಯ ಮಹಾ ನಿರ್ದೇಶಕ ಪ್ರೊ.ಸಚಿನ್ ಚತುರ್ವೇದಿ ಮುಖ್ಯ ಅತಿಥಿಯಾಗಿ ಭಾಷಣ ಮಾಡುವರು.

ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಯಾಗಿರುವ ಥಾವರ್ ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿರುವರು. ರಾಜ್ಯ ಉನ್ನತ ಶಿಕ್ಷಣ ಸಚಿವ  ಹಾಗೂ ವಿವಿಯ ಸಹಕುಲಾಧಿಪತಿ ಡಾ.ಎಂ.ಸಿ.ಸುಧಾಕರ್ ಈ ಬಾರಿ ಸರಕಾರದ ನಿಯಮದಂತೆ ಘಟಿಕೋತ್ಸವದಲ್ಲಿ ಐದು ನಿಮಿಷಗಳ ಕಾಲ ಮಾತನಾಡುವ ಅವಕಾಶವಿದೆ ಎಂದರು.

ಘಟಿಕೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ 155 ಮಂದಿಗೆ ಪಿ.ಎಚ್.ಡಿ. ಡಾಕ್ಟರೇಟ್ ಪದವಿ (ಕಲೆ -51, ವಿಜಾನ -73 ವಾಣಿಜ್ಯ 26 , ಶಿಕ್ಷಣ -5) ಇವರಲ್ಲಿ 60 ಮಹಿಳೆಯರು ಮತ್ತು 95 ಪುರುಷರು. ಈ ಬಾರಿ 18ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಹಾಗೂ 4 ಅಂತಾರಾಷ್ಟ್ರೀಯ ಮಹಿಳಾ ವಿದ್ಯಾರ್ಥಿಗಳು ಪಿ.ಎಚ್.ಡಿ ಪದವಿ ಪಡೆಯಲಿರುವರು. 58 ಚಿನ್ನದ ಪದಕ ಮತ್ತು 57  ನಗದು ಬಹುಮಾನಗಳಿದ್ದು, ವಿವಿಧ ಕೋರ್ಸ್‌ಗಳ ಒಟ್ಟು 168ರ‍್ಯಾಂಕ್‌ಗಳಲ್ಲಿ ಪ್ರಥಮ ರ‍್ಯಾಂಕ್ ಪಡೆದ 72 ಮಂದಿಗೆ ರ‍್ಯಾಂಕ್ ಪ್ರಮಾಣ ಪತ್ರ ನೀಡಲಾಗುವುದು. ಇವರಲ್ಲಿ ಸ್ನಾತಕೋತ್ತರ ಪದವಿ 52ಮತ್ತು 20 ಪದವೀಧರರು ಎಂದು ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯ  2022-23 ನೆ ಸಾಲಿಗೆ ನಡೆಸಿದ ವಿವಿಧ ಪರೀಕ್ಷೆಗಳಲ್ಲಿ ಒಟ್ಟು 29465 ವಿದ್ಯಾರ್ಥಿಗಳು ಹಾಜಾಗಿದ್ದು,  2139 (ಶೇ.  7235) ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಸ್ನಾತಕೋತ್ತರ ಪದವಿ ಪರೀಕ್ಷೆಗೆ  3277ವಿದ್ಯಾರ್ಥಿಗಳು ಹಾಜರಾಗಿದ್ದು,  2094(ಶೇ. 94.42) ಮಂದಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದರು.

ಕುಲಸಚಿವ ರಾಜುಮೊಗವೀರ, ಹಣಕಾಸು ವಿಭಾಗದ ಪ್ರೊ. ಸಂಗಪ್ಪ, ಪರೀಕ್ಷಾಂಗ ಕುಲಸಚಿವ ಡಾ. ದೇವೇಂದ್ರಪ್ಪ, ಮಂಗಳೂರು ವಿ. ವಿ. ಕಾಲೇಜು ಪ್ರಾಂಶುಪಾಲ ಗಣಪತಿ ಗೌಡ ಉಪಸ್ಥಿತರಿದ್ದರು.

Related posts

ಜ. 22 ರಂದು ಡೊಂಬಿವಲಿಯ ಶ್ರೀ ಜಗದಂಬ ಮಂದಿರದಲ್ಲಿ ಅಯೋಧ್ಯ ಮೂರ್ತಿ ಪ್ರತಿಷ್ಠೆಯ ಅಂಗವಾಗಿ ವಿಶೇಷ ಪೂಜೆ

Mumbai News Desk

ಅ. 24ರಂದು ಮಾಲಾಡ್ ಪೂರ್ವ  ಓಂ ಶ್ರೀ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್  ನವರಾತ್ರಿ ಪೂಜೆ 

Chandrahas

ಎ. 14 ರಂದು ಗೋರೆಗಾಂವ್ ಕರ್ನಾಟಕ ಸಂಘದ ತುಳು ಪರ್ಬ ದತ್ತಿ ನಿಧಿ ಕಾರ್ಯಕ್ರಮ  

Mumbai News Desk

ಕುಮಾರ  ಕ್ಷತ್ರಿಯ ಸಂಘ  ಮುಂಬಯಿ: ಫೆಬ್ರವರಿ 11 : 58 ನೇ ವಾರ್ಷಿಕ ಮಹಾಸಭೆ , ಸತ್ಯನಾರಾಯಣ ಮಹಾಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಗೋರೆಗಾಂವ್ ಕರ್ನಾಟಕ ಸಂಘ : ಮಾ. 9ರಂದು 66ನೇ ನಾಡಹಬ್ಬ ಹಾಗೂ ವಿಚಾರಗೋಷ್ಠಿ

Mumbai News Desk

ದಹಿಸರ್ ಪೂರ್ವ :ಶ್ರೀ ಜಯಸ್ವಾಮಿ ದಹಿಸರ್ ಅತ್ತೂರು ಗುಂಡ್ಯಡ್ಕ ಇವರ ಆಯೋಜನೆಯಲ್ಲಿ, ಡಿ. 1ರಂದು 18ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ,

Mumbai News Desk