30.3 C
Karnataka
April 5, 2025
ತುಳುನಾಡು

ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆ




ಸುರತ್ಕಲ್ : ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಸಮಾಜಸೇವಕ, ಉದ್ಯಮಿ ಮುಂಬೈ ವಿ.ಕೆ.ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆಯಾಗಿದ್ದಾರೆ. ಸುರತ್ಕಲ್ ಬಂಟರ ಸಂಘದ ಮಹಾಸಭೆಯಲ್ಲಿ ಕರುಣಾಕರ ಎಂ ಶೆಟ್ಟಿ ಅವರನ್ನು ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲು ಠರಾವು ಮಂಡಿಸಲಾಯಿತು. ಬಳಿಕ ಸಂಜೆ ನಡೆದ ಬಹಿರಂಗ ಅಧಿವೇಶನದಲ್ಲಿ ಕರುಣಾಕರ ಶೆಟ್ಟಿ ಅವರನ್ನು ನೂತನ ಕಟ್ಟಡ ಸಮಿತಿಯ ಅಧ್ಯಕ್ಷರನ್ನಾಗಿ ಘೋಷಿಸಲಾಯಿತು. ಬಳಿಕ ಸಂಘದ. ವತಿಯಿಂದ ಕರುಣಾಕರ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಬಳಿಕ ಮಾತನಾಡಿದ ಕರುಣಾಕರ ಶೆಟ್ಟಿ ಅವರು ದೊಡ್ಡ ಜವಾಬ್ದಾರಿಯನ್ನು ನೀಡಿದ್ದೀರಿ. ಇದಕ್ಕೆ ಪ್ರತಿಯೊಬ್ಬ ಸದಸ್ಯರ ಸಹಕಾರ ಬೇಕು. ಸುರತ್ಕಲ್ ನಲ್ಲಿ ಭವ್ಯವಾದ ಹವಾನಿಯಂತ್ರಿತ ಕಟ್ಟಡವನ್ನು ನಿರ್ಮಿಸೋಣ ಎಂದರು. ಈ ಸಂದರ್ಭದಲ್ಲಿ  ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಉಪಾಧ್ಯಕ್ಷ ಪುಷ್ಪರಾಜ ಶೆಟ್ಟಿ ಕುಡುಂಬೂರು,  ಕೋಶಾಧಿಕಾರಿ ಅವಿನಾಶ್ ಶೆಟ್ಟಿ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ, ಮಾಜೀ ಅಧ್ಯಕ್ಷರಾದ ದೇವಾನಂದ ಶೆಟ್ಟಿ, ಉಲ್ಲಾಸ್ ಶೆಟ್ಟಿ ಪೆರ್ಮುದೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪ್ರಪಂಚಾದ್ಯಂತ ನೆಲೆಸಿರುವ ಜನರು ಕಾಪು ಮಾರಿಗುಡಿಯನ್ನೊಮ್ಮೆ ನೋಡಬೇಕು : ಶಿರೂರು ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ 

Mumbai News Desk

ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಸೋತ್ಸವ, ಧಾರ್ಮಿಕ ಸಭೆ;

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಇಂದಿನಿಂದ ಮಾ. 5ರ ತನಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Mumbai News Desk

ಪೊಲಿಪು ಕಾಂಚನ್ ಮೂಲಸ್ಥಾನ – ನಾಗರ ಪಂಚಮಿ ಆಚರಣೆ, ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ

Mumbai News Desk

ಮಲ್ಪೆ- ಕಡಲ ಮಕ್ಕಳಿಂದ ಸಂಭ್ರಮದ ಸಮುದ್ರ ಪೂಜೆ.

Mumbai News Desk