
ಮುಂಬಯಿ ಜು2. ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಸಮಿತಿಯ ವತಿಯಿಂದ ಜು. 6 ನೇ ಶನಿವಾರ ಬೆಳಿಗ್ಗೆ ಗಂ.9.00 ರಿಂದ ಮಧ್ಯಾಹ್ಣ 1.00 ತನಕ ಬಂಟರ ಸಂಘ ಮುಂಬಯಿಯ ಬಂಟ್ಸ್ ಹೆಲ್ತ್ ಕೇರ್ ಸಮಿತಿ ಹಾಗೂ ತುಂಗಾ ಆಸ್ಪತ್ರೆಗಳ ಸಮೂಹದ ಸಹಭಾಗಿತ್ವದಲ್ಲಿ ಉಚಿತ ವೈದ್ಯಕೀಯ ಶಿಬಿರವನ್ನು ಮಲಾಡ್ ಪಶ್ಚಿಮದ ತುಂಗಾ ಮಲ್ಟಿ ಸ್ಪೆಶಾಲಿಟಿ ಹಾಸ್ಪಟಲ್, ಮಿಲಾಪ್ ಪಿವಿ ಆರ್ ಸಿನಿಮಾದ ಬಳಿ, ಗೋರಸ್ ವಾಡಿ ಲೇನ್ , ಎಸ್ ವಿ ರೋಡ್ ಮಲಾಡ್ (ಪ) ಇಲ್ಲಿ ಆಯೋಜಿಸಲಾಗಿದೆ.
ಬಂಟರ ಸಂಘ ಮುಂಬಯಿಯ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ಬಂಟ್ಸ ಹೆಲ್ತ್ ಕೇರ್ ಸಮಿತಿಯ ಕಾರ್ಯಕ್ರಮವು ಸಮಾಜ ಬಾಂಧವರ ಆರೋಗ್ಯದ ಕಾಳಜಿಯನ್ನು ವಹಿಸುವ ಒಂದು ಅರ್ಥಪೂರ್ಣ ಕಾರ್ಯಕ್ರಮ. ಜು.6 ರಂದು ಬೆಳಿಗ್ಗೆ ಶಿಬಿರವು ಉದ್ಘಾಟನೆಗೊಳ್ಳಲಿದ್ದು ಬಳಿಕ ನುರಿತ ವೈದ್ಯಕೀಯ ತಜ್ಞರಿಂದ ವಿವಿಧ ರೀತಿಯ ಆರೋಗ್ಯ ತಪಾಸಣೆಗಳು ನಡೆಯಲಿದೆ. ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರೇಮನಾಥ ಶೆಟ್ಟಿ ಕೊಂಡಾಡಿ ಇವರ ನೇತೃತ್ವದಲ್ಲಿ, ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ, ಬಂಟ್ಸ್ ಹೆಲ್ತ್ ಕೇರ್ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ.ಸ್ವರೂಪ್ ಹೆಗ್ಡೆ ,ಸಂಘದ ಪಶ್ಚಿಮ ವಲಯದ ಪ್ರಾದೇಶಿಕ ಸಮಿತಿಗಳ ಸಮನ್ವಯಕರಾದ ಖಾಂದೇಶ್ ಭಾಸ್ಕರ್ ಶೆಟ್ಟಿ ಯವರ ಮಾರ್ಗದರ್ಶನದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿರುತ್ತದೆ. ಪ್ರಾದೇಶಿಕ ಸಮಿತಿಯ ಹೆಲ್ತ್ ಕೇರ್ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ರಾಜಶೇಖರ್ ಶೆಟ್ಟಿಯವರು ಶಿಬಿರದ ವ್ಯವಸ್ಥೆಗಳ ಎಲ್ಲಾ ಜವಾಬ್ದಾರಿಯನ್ನು ವಹಿಸಿಕೊಂಡಿರುತ್ತಾರೆ. ಬಂಟರ ಸಂಘದ ಹಾಗೂ ಪ್ರಾದೇಶಿಕ ಸಮಿತಿಯ ಎಲ್ಲಾ ಪದಾಧಿಕಾರಿಗಳು,ಸಲಹೆಗಾರರು, ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ಎಲ್ಲಾ ಉಪಸಮಿತಿಗಳ ಸದಸ್ಯರುಗಳು ಸಂಪೂರ್ಣ ಸಹಕಾರವನ್ನು ನೀಡಿರುತ್ತಾರೆ.
ಜೋಗೇಶ್ವರಿಯಿಂದ ದಹಿಸರ್ ತನಕದ ಸಮಾಜ ಬಾಂಧವರ ಆರೋಗ್ಯದ ಕಾಳಜಿಯಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಎಲ್ಲಾ ರೀತಿಯ ಆರೋಗ್ಯ ತಪಾಸಣೆಗಳು ನಡೆಯಲಿದ್ದು, ಉಚಿತವಾಗಿ ನುರಿತ ವೈದ್ಯರ ಸಲಹೆ ದೊರೆಯಲಿದೆ. ಸಮಾಜ ಭಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಬಂಟರ ಸಂಘ ಮುಂಬಯಿಯ ಉಪಾಧ್ಯಕ್ಷರಾದ ಮಹೇಶ್ ಎಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್ ಕೆ ಶೆಟ್ಟಿ, ಗೌ. ಕೋಶಾಧಿಕಾರಿ ಸಿಎ ರಮೇಶ್ ಬಿ. ಶೆಟ್ಟಿ, ಜೊತೆ ಕಾರ್ಯದರ್ಶಿ ಗಿರೀಶ್ ಆರ್. ಶೆಟ್ಟಿ ತೆಲ್ಲಾರ್, ಜೊತೆ ಕೋಶಾಧಿಕಾರಿ, ಶಶಿಧರ ಕೆ. ಶೆಟ್ಟಿ ಇನ್ನಂಜೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಚಿತ್ರಾ ಆರ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸವಿನ್ ಜೆ ಶೆಟ್ಟಿ , ಪ್ರಾದೇಶಿಕ ಸಮಿತಿಯ ಸಂಚಾಲಕರಾದ ನಿಟ್ಟೆ ಮುದಣ್ಣ ಜಿ. ಶೆಟ್ಟಿ, ಉಪಕಾರ್ಯಾಧ್ಯಕ್ಷ ಗಂಗಾಧರ ಎ. ಶೆಟ್ಟಿ, ಕಾರ್ಯದರ್ಶಿ ರಮೇಶ್ ಎಂ ಶೆಟ್ಟಿ,ಕೋಶಾಧಿಕಾರಿ ಅವಿನಾಶ್ ಎಂ ಶೆಟ್ಟಿ, ಜೊತೆ ಕಾರ್ಯದರ್ಶಿ ಜಯ ಶೆಟ್ಟಿ, ಕೋಶಾಧಿಕಾರಿ ಸಂಕೇತ್ ಎಸ್. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುನಿತಾ ಎನ್. ಹೆಗ್ಡೆ, ಸಂಚಾಲಕಿ ಶೈಲಜಾ ಎ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಕ್ಷಜ್ ಆರ್. ಶೆಟ್ಟಿ,ಮುಖ್ಯ ಸಲಹೆಗಾರರಾದ ಮುಂಡಪ್ಪ ಎಸ್. ಪಯ್ಯಡೆ, ಮನೋಹರ ಎನ್. ಶೆಟ್ಟಿ, ನಿತ್ಯಾನಂದ ಹೆಗ್ಡೆ, ವಿಜಯ ಆರ್. ಭಂಡಾರಿ ಮತ್ತು ರವೀಂದ್ರ ಎಸ್. ಶೆಟ್ಟಿ ಮತ್ತು ಎರ್ಮಾಳು ಹರೀಶ್ ಶೆಟ್ಟಿಯವರು ತಿಳಿಸಿರುತ್ತಾರೆ . ಪ್ರಾದೇಶಿಕ ಸಮಿತಿಯ ವ್ಯಾಪ್ತಿಯಲ್ಲಿರುವ ಎಲ್ಲಾ ಸಮಾಜ ಬಾಂಧವರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕಾರ್ಯಾಧ್ಯಕ್ಷರಾದ ಶ್ರೀ ಪ್ರೇಮನಾಥ ಶೆಟ್ಟಿ ಕೊಂಡಾಡಿಯವರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿರುತ್ತಾರೆ.
——–