
ಮುಂಬಯಿ ಅ22. ನಗರದ ಪ್ರತಿಷ್ಟಿತ ಜಾತಿಯ ಸಂಸ್ಥೆಗಳಲ್ಲಿ ಒಂದಾದ ಬಾಂಬೆ ಬಂಟ್ಸ್ ಅಸೋಷಿಯೇಶನ್ ಪ್ರತಿ ವರ್ಷ ನೀಡುತ್ತಿರುವ ವಾರ್ಷಿಕ ಶೈಕ್ಷಣಿಕ ಸಹಾಯ ವಿತರಣಾ ಕಾರ್ಯಕ್ರಮವು ಆಗಸ್ಟ್ 25ರಂದು ರವಿವಾರ ಜುಯಿ ನಗರದ ಬಂಟ್ಸ್ ಸೆಂಟರ್ ನ ಶಶಿಕಲಾ ಮನಮೋಹನ್ ಶೆಟ್ಟಿ ಕಾಂಪ್ಲೆಕ್ಸ್ ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾ ಗ್ರಹದಲ್ಲಿ ಬಾಂಬೆ ಬಂಟ್ಸ್ ಅಸೋಷಿಯೇಶನಿನ ಅಧ್ಯಕ್ಷರಾದ ಸಿಎ ಸುರೇಂದ್ರ ಕೆ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರಗಲಿರುವುದು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪ್ರಸಿದ್ಧ ಉದ್ಯಮಿ ಬಾಂಬೆ ಬಂಟ್ಸ್ ಅಸೋಷಿಯೇಶನಿನ ಟ್ರಸ್ಟಿ ಹೇರಂಬ ಕೆಮಿಕಲ್ಸ್ ನ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ ಅವರು ಭಾಗವಹಿಸಲಿರುವರು. ಗೌರವ ಅತಿಥಿಗಳಾಗಿ ಬಾಂಬೆ ಬಂಟ್ಸ್ ಅಸೋಷಿಯೇಶನಿನ ಟ್ರಸ್ಟಿ ವಿಕೆ ಗ್ರೂಪ ಕಂಪನಿ ಸಿಎಂಡಿ ಕೆಎಂ ಶೆಟ್ಟಿ, ಕೃಷ್ಣ ಪ್ಯಾಲೆಸ್ ಗ್ರೂಪ್ ಹೋಟೆಲ್ ಸಿ ಎಂ ಡಿ ಕೃಷ್ಣ ವೈ ಶೆಟ್ಟಿ, ಆನಂದ ಶೆಟ್ಟಿ
ಮುಖ್ಯಸ್ಥರು ನೊವೊ ನೊರ್ಡಿಸ್ಕ್, ಆಗ್ನೇಯ ಏಷ್ಯಾ.
ಸಿಂಗಾಪುರ ತುಂಗಾ ಆಸ್ಪತ್ರೆಯ ನಿರ್ದೇಶಕ ಜವಾಬ್ ಸಂಸ್ಥೆಯ ಅಧ್ಯಕ್ಷ ರಾಜೇಶ್ ಶೆಟ್ಟಿ, ಬಾಂಬೆ ಬಂಟ್ಸ್ ಅಸೋಷಿಯೇಶನಿನ ಟ್ರಸ್ಟಿ ಮಾಜಿನಗರ ಸೇವಕ ಸುರೇಶ್ ಜಿ ಶೆಟ್ಟಿ, ಭಾಗವಹಿಸುವರು.
ಮಧ್ಯಾಹ್ನ ಗಂಟೆ 3ರಿಂದ ಬಾಂಬೆ ಬಂಟ್ಸ್ ಅಸೋಷಿಯೇಶನಿನ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ಯಕ್ಷ ಗುರು ಅಜೆಕಾರ ಬಾಲಕೃಷ್ಣ ಶೆಟ್ಟಿ ಅವರ ನಿರ್ದೇಶನದಲ್ಲಿ ಶ್ರೀದೇವಿ ಲಲಿತೋಪಕ್ಯಾನ ಯಕ್ಷಗಾನ ಪ್ರದರ್ಶನಗೊಳ್ಳಲಿರುವುದು.
ಈ ಎಲ್ಲ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ವಿದ್ಯಾರ್ಥಿಗಳು ಭಾಗವಹಿಸಬೇಕೆಂದು.ಬಾಂಬೆ ಬಂಟ್ಸ್ ಅಸೋಷಿಯೇಶನಿನ ಉಪಾಧ್ಯಕ್ಷ ಅಡ್ವಕೇಟ್ ಡಿ. ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ, ಐಕಳ ಕಿಶೋರ್ ಕೆ ಶೆಟ್ಟಿ, ಕೋಶಾಧಿಕಾರಿ ಸಿಎ ವಿಶ್ವನಾಥ್ ಎಸ್ ಶೆಟ್ಟಿ , ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಕೆ ಸುರೇಂದ್ರ ಶೆಟ್ಟಿ, ಜೊತೆ ಕಾರ್ಯದರ್ಶಿ ನ್ಯಾಯವಾದಿ ಗುಣಕರ್ ಡಿ ಶೆಟ್ಟಿ, ಜೊತೆ ಕೂಶಾಧಿಕಾರಿ ಸಿ ಎ ದಿವಾಕರ್ ಕೆ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ್ ವಿ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ತೇಜಾಕ್ಷಿ ಎಸ್ ಶೆಟ್ಟಿ , ಯುವ ವಿಭಾಗದ ಕಾರ್ಯಾಧ್ಯಕ್ಷೆ ದೃಶ್ಯ ಕೆ ಶೆಟ್ಟಿ ,ಮೊದಲಾದವರು ವಿನಂತಿಸಿಕೊಂಡಿದ್ದಾರೆ.