
ಕೇರಳದ ಕನ್ನಡಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡ ಸಾಹಿತ್ಯ ,ಸಾಂಸ್ಕೃತಿಕ ಅಕಾಡೆಮಿಯು, ಕೇರಳದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳ ಅಭಿವೃದ್ಧಿಗಾಗಿ ಅವಿರತವಾಗಿ ದುಡಿಯುವ ಸಂಘಟನೆಯಾಗಿದೆ.
ಸಂಸ್ಥೆಯು ಗಡಿನಾಡ ಕನ್ನಡ ರಾಜ್ಯೋತ್ಸವವನ್ನು 19.11. 23 ರಂದು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಕನ್ನಡಪರ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುತ್ತಿರುವ, ಸಂಘ – ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಯನ್ನು, ಈ ಬಾರಿ ಗೋರೆಗಾಂವ್ ಕರ್ನಾಟಕ ಸಂಘಕ್ಕೆ ನೀಡಲಿದೆ.
ಗೋರೆಗಾಂವ್ ಕರ್ನಾಟಕ ಸಂಘದ ಅಧ್ಯಕ್ಷರಾದ ನಿತ್ಯಾನಂದ ಡಿ. ಕೋಟ್ಯಾನ್ ಪ್ರಶಸ್ತಿಯನ್ನು ಸ್ವೀಕರಿಸಲಿರುವರು, ಎಂದು ಗಡಿನಾಡ ಸಾಹಿತ್ಯ ಸಂಸ್ಕೃತಿ ಅಕಾಡೆಮಿಯ ಸಂಸ್ಥಾಪಕರಾದ ಎಸ್. ಪ್ರದೀಪ್ ಕುಮಾರ್ ಕಲ್ಲೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.