32 C
Mumbai
March 7, 2026
Mumbai News Kannada
ಸುದ್ದಿ

ರಂಗಚಾವಡಿ” ವರ್ಷದ ಹಬ್ಬ, ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ.ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ* 





ಕಿಶೋರ್ ಶೆಟ್ಟಿ ಅವರದ್ದು ಕಲಾವಿದರಿಗೆ ಸ್ಫೂರ್ತಿ ತುಂಬುವ ವ್ಯಕ್ತಿತ್ವ” -ಡಾ.ಸಂಜೀವ ದಂಡೆಕೇರಿ* 

ಮಂಗಳೂರು ನ12. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಸಮಾಜ ಸೇವಕ ಸಂಘಟಕ   ಬಾಳ ಜಗನ್ನಾಥ ಶೆಟ್ಟಿಯವರು ಸ್ಥಾಪಿಸಿರುವ “ರಂಗಚಾವಡಿ” ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್ ಸುರತ್ಕಲ್ ಇದರ ಸಹಯೋಗದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ಸುರತ್ಕಲ್  ಬಂಟರ ಭವನದಲ್ಲಿ ಜರುಗಿತು.

ಚಲನಚಿತ್ರ ನಿರ್ಮಾಪಕ ಡಾ.ಸಂಜೀವ ದಂಡೆಕೇರಿ ದೀಪ ಪ್ರಜ್ವಲನೆಗೈದರು. ಬಳಿಕ ಮಾತಾಡಿದ ಅವರು, ರಂಗಚಾವಡಿ ಪ್ರಶಸ್ತಿ ಸ್ವೀಕರಿಸುತ್ತಿರುವ ಹಿರಿಯ ರಂಗಕರ್ಮಿ ಕಿಶೋರ್ ಡಿ. ಶೆಟ್ಟಿ ಅವರದು ಸಾವಿರಾರು ಕಲಾವಿದರಿಗೆ ಸ್ಫೂರ್ತಿ ತುಂಬುವ ವ್ಯಕ್ತಿತ್ವ. ಅವರನ್ನು ಪಡೆದಿರುವುದು ನಮ್ಮ ತುಳುನಾಡಿನ ಸಮಸ್ತ ಕಲಾವಿದರ ಪುಣ್ಯ. ಬಡಹೆಣ್ಣುಮಕ್ಕಳ ಮದುವೆ, ಬಡಕುಟುಂಬದ ಆರ್ಥಿಕ ಸಂಕಷ್ಟಕ್ಕೆ ಕಿಶೋರ್ ಶೆಟ್ಟಿ ಅವರು ಸದಾ ನೆರವು ನೀಡಿದವರು. ಅವರಿಗೆ ಅರ್ಹವಾಗಿಯೇ ಈ ಪ್ರಶಸ್ತಿ ಸಂದಿದೆ. ಸಂಘಟನೆಯ ಈ ಕ್ರಮ ಶ್ಲಾಘನೀಯವಾದುದು“ ಎಂದರು.

ವೇದಿಕೆಯಲ್ಲಿ ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ.ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ-2024 ಪ್ರದಾನ ಮಾಡಲಾಯಿತು. ಸನ್ಮಾನ ಸ್ವೀಕರಿಸಿ ಮಾತಾಡಿದ ಅವರು, “ನನ್ನ ತಂಡದ ಕಲಾವಿದರಿಂದ ನಾನಿದ್ದೇನೆ, ಅವರಿಲ್ಲದೆ ನಾನೇನೂ ಇಲ್ಲ. ನಾನು ಮಾಡಿರುವ ದಾನ ಧರ್ಮ ಏನೂ ಇಲ್ಲ. ನೊಂದವರಿಗೆ ನೆರವಾಗುವುದು ದೇವರ ಸೇವೆ. ಇದು ನನಗೆ ಅಪ್ಪ ಅಮ್ಮ ಕಲಿಸಿದ್ದು. ಈ ಪ್ರಶಸ್ತಿಯನ್ನು ಬಹಳ ಖುಷಿಯಿಂದ ಸ್ವೀಕರಿಸುತ್ತಿದ್ದೇನೆ. ಇಂತಹ ಪ್ರಶಸ್ತಿ ನನ್ನ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ, ಉದ್ಯಮಿ, ಶ್ರೀ ಡೆವಲಪರ್ಸ್ ಸಂಸ್ಥೆಯ ಮಾಲಕ  ಗಿರೀಶ್‌ ಎಂ ಶೆಟ್ಟಿ ಕಟೀಲು ಅವರು, ”ಬಾಳ ಜಗನ್ನಾಥ ಶೆಟ್ಟಿ ಅವರು ರಂಗಭೂಮಿ ಕಲಾವಿದರನ್ನು ಗುರುತಿಸಲು ಹುಟ್ಟುಹಾಕಿದ ರಂಗಚಾವಡಿ ಸಂಘಟನೆ ಇಂದು ಯಶಸ್ವಿಯಾಗಿ ಮುನ್ನಡೆಯುತ್ತಿದೆ.  ಕಲಾವಿದರನ್ನು ಗುರುತಿಸಿ ಬೆನ್ನು ತಟ್ಟುತ್ತಿರುವ ಇಂತಹ ಸಂಘಟನೆಯ ಕಾರ್ಯ ಶ್ಲಾಘನೀಯ ಎಂದರು. 

ವೇದಿಕೆಯಲ್ಲಿ ಉದ್ಯಮಿ, ಸಮಾಜಸೇವಕ  ಅನಿಲ್ ಶೆಟ್ಟಿ ತೇವು-ಸೂರಿಂಜೆ, ಬಂಟರ ಸಂಘ ಸುರತ್ಕಲ್ ಇದರ ನಿರ್ದೇಶಕ ಜಗದೀಶ್ ಶೆಟ್ಟಿ ಪೆರ್ಮುದೆ, ಜಯಕಿರಣ ಪತ್ರಿಕೆ ಮಾಲಕ ಪ್ರಕಾಶ್ ಪಾಂಡೇಶ್ವರ್, ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್ ಇದರ ಅಧ್ಯಕ್ಷ ರಮೇಶ್‌ ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಎಸ್. ಪೂಂಜ, ಉದ್ಯಮಿ ಜಯರಾಮ ಶೇಖ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ, ರಂಗಚಾವಡಿ ಸಂಸ್ಥೆಯ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ, ಚಿತ್ರಾ ಜೆ ಶೆಟ್ಟಿ   ಮತ್ತಿತರರು ಉಪಸ್ಥಿತರಿದ್ದರು. 

ಗಿರೀಶ್ ಸಾಗರ ದೇವರನ್ನು ಸ್ತುತಿಸಿದರು. ಪತ್ರಕರ್ತ ಶರತ್ ಶೆಟ್ಟಿ ಕಿನ್ನಿಗೋಳಿ ಅಭಿನಂದನಾ ಭಾಷಣಗೈದರು.‌ ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು. 

ಬಳಿಕ ಗಾನಲಹರಿ, ಲಯನ್ ಕಿಶೋರ್ ಶೆಟ್ಟಿಯವರ ಸಾರಥ್ಯದ ಶ್ರೀ ಲಲಿತೆ ಕಲಾವಿದರಿಂದ ನವನೀತ ಶೆಟ್ಟಿ ರಚಿಸಿರುವ “ಶನಿ ಮಹಾತ್ಮೆ” ತುಳು ಪೌರಾಣಿಕ ನಾಟಕ ಪ್ರದರ್ಶನ ನಡೆಯಿತು.

——–

ಕಲೆ ಕಲಾವಿದರಿಗೆ ಸದಾ ಪ್ರೋತ್ಸಾಹ: ಬಾಳ ಜಗನ್ನಾಥ ಶೆಟ್ಟಿ,

ರಂಗ ಚಾವಡಿಯ ಸಂಸ್ಥಾಪಕ ಪತ್ರಕರ್ತ ಬಾಳ ಜಗನ್ನಾಥ್ ಶೆಟ್ಟಿ ಪ್ರಾಸ್ತಾವಿಕ ಮಾತೆನಾಡುತ್ತಾ ಪತ್ರಿಕಾ ಮಾಧ್ಯಮದಲ್ಲಿ ಬೆಳೆಯುತ್ತಿದ್ದಾಗ ಕಲೆಯ ಬಗ್ಗೆ ಮತ್ತು ಕಲಾವಿದರ ಬಗ್ಗೆ ಹತ್ತಿರದಿಂದ ತಿಳಿದಿದ್ದೇನೆ ಅವರಿಗೆ ಸದಾ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಂಗ ಚಾವಡಿ ಪ್ರಾರಂಭಗೊಂಡಿದೆ ಆ ಮೂಲಕ ಕಲೆ ಕಲಾವಿದರಿಗೆ ಸದಾ ಪ್ರೋತ್ಸಾಹವನ್ನು ನೀಡುತ್ತಾ ಬಂದಿದ್ದೇನೆ, ರಂಗಚಾವಣಿಯ ಮೂಲಕ ಮಾಡುವ ಸೇವಾಕಾರಿಗಳಿಗೆ ಬಹಳಷ್ಟು ಜನ ಸಹಕಾರವನ್ನು ನೀಡಿದ್ದಾರೆ ಆ ಮೂಲಕ ಇಂಥ ಕಾರ್ಯಕ್ರಮಗಳು ರೂಪಗೊಳ್ಳಲು ಸಾಧ್ಯವಾಗಿದೆ ಎಂದು  ನುಡಿದರು



Related posts

ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳನ್ನು ದಾಟಿದ ಮೊದಲ ವಿಶ್ವ ನಾಯಕ ಪ್ರಧಾನಿ ಮೋದಿ

Mumbai News Desk

ಜ.11 : ಡಿವೈನ್ ಪಾರ್ಕ್‌ನ ಮಹಾರಾಷ್ಟ್ರ ಘಟಕದ ವತಿಯಿಂದ ಡಾಕ್ಟರ್‌ಜೀ ಅವರಿಗೆ ಶ್ರದ್ಧಾಂಜಲಿ ಹಾಗೂ ಪ್ರಾರ್ಥನಾ ಸಭೆ

Mumbai News Desk

ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಫ್ರಾನ್ಸಿಸ್ ನಿಧನ.

Mumbai News Desk

ಮಹಾರಾಷ್ಟ್ರದಲ್ಲಿ ಈದ್ ಮಿಲಾದ್ ರಜೆ ಸೆ.16 ರ ಬದಲು ಸೆ. 18ಕ್ಕೆ.

Mumbai News Desk

ಕುಲಾಲ ಭವನ ಉದ್ಘಾಟನೆ: ದಾನಿಗಳು ಮತ್ತು ಗಣ್ಯರಿಗೆ ಕುಲಾಲ ಸಂಘ ಮುಂಬೈ ವತಿಯಿಂದ ಗೌರವ ಸನ್ಮಾನ

Mumbai News Desk

ಸಾಂತಾಕ್ರೂಜ್ ಪೂರ್ವ: ಸಿ ಎ ಸುನಿಲ್ ಶೆಟ್ಟಿ ನಿಧನ.

Mumbai News Desk